ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೊಬೈಲ್ ಫೋನ್ ಹೆಚ್ಚಾಗಿ ಬಳಸಬೇಡ ಎಂದು ಗದರಿದ್ದ ಕಾರಣಕ್ಕೆ ಮನನೊಂದು ಒಂಬತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರದ ಚಿಟ್ಟವಲಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಒಂಬತ್ತನೇ ತರಗತಿ ವಿದ್ಯಾರ್ಥಿ ಲೋಕೇಶ್ ಮರಣಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೊಬೈಲ್ ಅತಿಯಾಗಿ ಬಳಸುತ್ತಿದ್ದ ಲೋಕೇಶ್‌ಗೆ ಮನೆಯವರು ಗದರಿದ್ದರು, ಮಾತಿಗೆ ಮಾತು ಬೆಳೆದು ಬಾಲಕ ಮನೆಯಿಂದ ಹೊರಬಂದಿದ್ದಾನೆ. ನಿರ್ಜನ ಪ್ರದೇಶಕ್ಕೆ ತೆರಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.