ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮೊಬೈಲ್ ಕಳ್ಳನ ಬಂಧನ: 2 ಲಕ್ಷ ಮೌಲ್ಯದ ಸೊತ್ತು ವಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………

ಹೊಸ ದಿಗಂತ ವರದಿ, ಹಾವೇರಿ:

ಜಿಲ್ಲೆಯ ಹಾನಗಲ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು ಓರ್ವ ಮೊಬೈಲ್ ಕಳ್ಳನನ್ನು ಬಂಧಿಸಿ ಅವನಿಂದ ಅಂದಾಜು 2 ಲಕ್ಷ ಮೌಲ್ಯದ ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವನಿಂದ ವಿವಿಧ ಕಂಪನಿಗಳ 50 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಹಾನಗಲ್ಲ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ಇಬ್ಬರು ಮೊಬೈಲ್ ಮಾರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಇಬ್ಬರು ಮಾರಾಟ ಮಾಡುತ್ತಿದ್ದರು ಇವರಲ್ಲಿ ನಿತಿನ ಗೌಂಡಿ ಎನ್ನುವವನ್ನು ಬಂಧಿಸಿದ್ದು ಇನ್ನೋರ್ವ ಮಧು ಕೆರೇಕ್ಯಾತನಹಳ್ಳಿ ಎನ್ನುವವನು ತಪ್ಪಿಸಿಕೊಂಡು ಹೋಗಿದ್ದಾರೆ. ಇವರಿಬ್ಬರು ಹಾನಗಲ್ಲ ತಾಲೂಕಿನ ಹುಲಗಿನಕೊಪ್ಪ ಗ್ರಾಮದವರಾಗಿದ್ದಾರೆ ಎಂದು ತಿಳಿಸಿದರು.
ಹುಲಗಿನಕೊಪ್ಪ ಗ್ರಾಮದಲ್ಲಿ ಇದೇ ರೀತಿ ಕಳ್ಳತನ ಮಾಡಿಕೊಂಡು ಬಂದ ಮೊಬೈಲ್ ಗಳನ್ನು ಮಾರಾಟ ಮಾಡುವವರ ದೊಡ್ಡ ಜಾಲವೇ ಇದೆ ಎಂದು ತಿಳಿದುಬಂದಿದ್ದು ಈ ಕುರಿತು ತನಿಖೆಯನ್ನು ಮಾಡಲಾಗುವುದು.
ಮಧು ಎನ್ನುವ ವ್ಯಕ್ತಿಯೂ ಈ ಹಿಂದೆಯೂ ಇಂತಹದೇ ಪ್ರಕರಣದಲ್ಲಿ ಸಿಕ್ಕು ಹಾಕಿಕೊಂಡು ಪ್ರಕರಣವೂ ದಾಖಲಾಗಿತ್ತು. ಮೊಬೈಲ್ ಮಾರಾಟ ಜಾಲದ ಕುರಿತ ತನಿಖೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್‌ಪಿ ನೇತೃತ್ವದಲ್ಲಿ ತಂಡವನ್ನು ರಚಿಸಲಾಗುವುದು ಎಂದು ತಿಳಿಸಿದರು.
ಪ್ರಾಥಮಿಕ ತನಿಖೆಯಿಂದ ಮೊಬೈಲ್ ಮಾರಾಟ ಜಾಲದಲ್ಲಿ ಅಂತರಾಜ್ಯದ ಸಂಪರ್ಕವಿರುವುದು ತಿಳಿದು ಬಂದಿದ್ದು ಈ ಕುರಿತು ಸಮಗ್ರವಾದ ತನಿಖೆಯಿಂದ ಗೊತ್ತಾಗಲಿದೆ ಎಂದರು.
ಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ, ಡಿವಾಯ್‌ಎಸ್‌ಪಿ ಓ.ಬಿ.ಕಲ್ಲೇಶಪ್ಪ, ಸಿಪಿಐ ಶಿವಶಂಕರ ಗಣಾಚಾರಿ ಇದ್ದರು. ಕಾರ್ಯಾಚರಣೆಯಲ್ಲಿ ಸಿಬ್ಬಂಧಿಗಳಾದ ನೀಲಪ್ಪ ನರಲಾರ, ಎನ್.ಕೆ.ನಿಂಗನಹಳ್ಳಿ, ಜೆ.ಸಿ.ರಾಠೋಡ, ಎಸ್.ಎಂ.ಕಂಬಳಿ, ಎಂ.ಎಂ.ಮಾದರ, ಎಸ್.ಜಿ.ಸೋಮಸಾಗರ ಹಾಗೂ ಬಿ.ಹೆಚ್.ಗೋಡಿಹಾಳ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss