ಮೋಚಾ ಎಫೆಕ್ಟ್‌: ಮುಂದಿನ 2 ದಿನ ಬಿರುಗಾಳಿ ಸಹಿತ ಭಾರಿ ಮಳೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಂಗಾಳ ಕೊಲ್ಲಿಯಲ್ಲಿ ಉಂಟಾದ ಮೋಚಾ ಚಂಡಮಾರುತ ಎಫೆಕ್ಟ್‌ ರಾಜ್ಯಕ್ಕೂ ತಟ್ಟಿದ್ದು, ವಿವಿಧ ಕಡೆ ವರುಣಾರ್ಭಟ (Karnataka Rain) ಜೋರಾಗಿದೆ.

ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ (Rain alert) ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather update) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಗುಡುಗು, ಮಿಂಚಿನ ಭಾರಿ (Weather Report) ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕರಾವಳಿಯಲ್ಲೂ ಮಳೆ ಮುಂದುವರಿಯಲಿದೆ.

ಗಿ ರಾಜ್ಯಾದ್ಯಂತ ಮೂರು ದಿನಗಳು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಚುನಾವಣಾ ಆಯೋಗಕ್ಕೆ ಈಗಾಗಲೇ ಸೂಚನೆ ನೀಡಿದ್ದೇವೆ. ಬುಧವಾರ ಮಧ್ಯಾಹ್ನದ ಮೇಲೆ ಮಳೆಯಾಗುವ ಸಾಧ್ಯತೆ ಇದೆ. ಬೆಳಗ್ಗೆ ಸಮಯ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಹೊತ್ತಿಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!