ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಅಂತೆಯೇ ಯುದ್ಧದ ಭೀತಿ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ ಮಾಕ್‌ಡ್ರಿಲ್ ಆರಂಭವಾಗಲಿದೆ.
ರಾಜಧಾನಿ ಬೆಂಗಳೂರು ಹಾಗೂ ರಾಯಚೂರಿನಲ್ಲಿ ಇಂದು ಮಾಕ್‌ಡ್ರಿಲ್ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ವಿದ್ಯುತ್ ಸ್ಥಗಿತವಾಗಲಿದೆ. ಬೆಂಗಳೂರಿನಲ್ಲಿ ಸಂಜೆ 5.30ರಿಂದ ಸಂಜೆ 7 ಗಂಟೆಯವರೆಗೆ ಮಾಕ್ ಡ್ರಿಲ್ ನಡೆಯುವ ಸಾಧ್ಯತೆ ಇದೆ. ಸಂಜೆ 6.40ರ ಸುಮಾರಿಗೆ ನಗರದಾದ್ಯಂತ ವಿದ್ಯುತ್ ಸ್ಥಗಿತಗೊಳ್ಳಲಿದೆ. ದೊಡ್ಡ ದೊಡ್ಡ ಕಟ್ಟಡಗಳನ್ನು ರಕ್ಷಣೆ ಮಾಡುವ ಅಣಕು ಪ್ರದರ್ಶನ ನಡೆಯುತ್ತದೆ. ವಾಟರ್ ಜೆಟ್ ಬಳಸಿ ರಕ್ಷಣಾ ಕಾರ್ಯಾಚರಣೆ ಅಣಕು ಪ್ರದರ್ಶನ ನಡೆಯಲಿದೆ.
ಇನ್‌ಕಮಿಂಗ್ ಏರ್ ರೈಡ್ ನಡೆಯುತ್ತಿದೆ. ನಂತರ ಸೈರನ್ ಮೊಳಗಲಿದೆ. ಬಳಿಕ ಸುರಕ್ಷತಾ ಕ್ರಮ ಕೈಗೊಳ್ಳಲಾಗುತ್ತೆ. ಇದಾದ ಬಳಿಕ ಬ್ಲಾಕ್ ಔಟ್ ಮಾಡಲಾಗುತ್ತದೆ. ಕಟ್ಟಡದಲ್ಲಿ ಬೆಂಕಿ ಬಿದ್ದ ಅಣಕು ಪ್ರದರ್ಶನ, ಸಂತ್ರಸ್ಥರ ಹುಡುಕಾಟ ಮತ್ತು ರಕ್ಷಣಾ ಕ್ರಮ, ಗಾಯಾಳುಗಳ ರಕ್ಷಣೆ ಮಾಡುವ ಅಣಕು ಪ್ರದರ್ಶನ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ಹಾಗೂ ಸೂಕ್ಷ್ಮ ಜಾಗದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರದ ಅಣಕು ಪ್ರದರ್ಶನ ನಡೆಯಲಿದೆ.
ಎಲ್ಲೆಲ್ಲಿ ನಡೆಯಲಿದೆ?
ಇಂಡಿಯನ್ ಇನ್ಸ್ಟಿಟ್ಯೂಟ್, ರಾಜಾಜಿನಗರ ಇಎಸ್ಐ ಆಸ್ಪತ್ರೆ, ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ (ಎನ್‌ಎಎಲ್), ಬೆಂಗಳೂರು ಡೈರಿ, ಕೆನರಾ ಬ್ಯಾಂಕ್, ಪೀಣ್ಯ ಎಸ್‌ಆರ್‌ಎಸ್, ವಿವಿ ಟವರ್ ಅಗ್ನಿಶಾಮಕ ಠಾಣೆ, ಜ್ಞಾನಭಾರತಿ ಅಗ್ನಿಶಾಮಕ ಠಾಣೆ, ಥಣಿಸಂದ್ರ ಅಗ್ನಿಶಾಮಕ ಠಾಣೆ, ಯಶವಂತಪುರ ಅಗ್ನಿಶಾಮಕ ಠಾಣೆ, ಬನಶಂಕರಿ ಅಗ್ನಿಶಾಮಕ ಠಾಣೆ, ರಾಜಾಜಿನಗರ ಅಗ್ನಿಶಾಮಕ ಠಾಣೆ, ಚಾಮರಾಜಪೇಟೆ ಅಗ್ನಿಶಾಮಕ ಠಾಣೆ, ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ, ಹಲಸೂರು ಗೇಟ್ ಪೊಲೀಸ್ ಠಾಣೆ, ಉಪ್ಪಾರಪೇಟೆ ಪೊಲೀಸ್ ಠಾಣೆ, ಆರ್‌ಆರ್ ನಗರ ಪೊಲೀಸ್ ಠಾಣೆ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ, ಕೆಆರ್ ಮಾರುಕಟ್ಟೆ ಪೊಲೀಸ್ ಠಾಣೆ, ವಯ್ಯಾಲಿಕಾವಲ್ ಪೊಲೀಸ್ ಠಾಣೆ, ಹಲಸೂರು ಗೃಹರಕ್ಷಕ ಕೇಂದ್ರ ಕಚೇರಿ, ಬೆಂಗಳೂರು ಗ್ರಾಮಾಂತರ ಗೃಹರಕ್ಷಕ ಕಚೇರಿ, ಬಾಗಲೂರು ಅಗ್ನಿಶಾಮಕ ಠಾಣೆ, ಪೀಣ್ಯ ಅಗ್ನಿಶಾಮಕ ಠಾಣೆ, ಅಂಜನಪುರ ಅಗ್ನಿಶಾಮಕ ಠಾಣೆ, ಐಟಿಪಿಎಲ್ ಅಗ್ನಿಶಾಮಕ ಠಾಣೆ, ಸರ್ಜಾಪುರ ರಸ್ತೆ ಅಗ್ನಿಶಾಮಕ ಠಾಣೆ, ಎಲೆಕ್ಟ್ರಾನಿಕ್ಸ್ ಸಿಟಿ ಅಗ್ನಿಶಾಮಕ ಠಾಣೆ, ಡೈರಿ ಸರ್ಕಲ್ ಅಗ್ನಿಶಾಮಕ ಠಾಣೆ ಬಳಿ ಮಾಕ್‌ಡ್ರಿಲ್ ನಡೆಯಲಿದೆ.