ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಡೆಲ್ ಒಬ್ಬಳು ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ.
ಅಂಜಲಿಗೆ ಈ ಹಿಂದೆಯೇ ನಿಶ್ಚಿತಾರ್ಥವಾಗಿತ್ತು. ಮದುವೆ ದಿನಾಂಕ ಕೂಡಾ ನಿಗದಿಯಾಗಿತ್ತು. ಆದರೆ ಆಕೆಯ ಭಾವಿ ಪತಿಯ ತಾಯಿ ನಿಧನರಾದ ಬಳಿಕ, ಈ ಮದವೆಯನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿತ್ತು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು, ಅಂಜಲಿ ಭಾವಿ ಪತಿಯನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಳು. ಆ ಸಮಯದಲ್ಲಿ ಆತ ಸಂಪರ್ಕಕ್ಕೆ ಸಿಕ್ಕಿರಲಿಲ್ಲ ಎಂದು ತಿಳಿಸಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಅಂಜಲಿ ನೇಣು ಬಿಗಿದುಕೊಂಡಿದ್ದಾಳೆ. ಮನೆಯವರು ಹಿಂದಿರುಗಿದಾಗ, ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮೊದಲು, ಅಂಜಲಿ ಸೋಷಿಯಲ್ ಮೀಡಿಯಾದಲ್ಲಿ ಕೆಲವು ಭಾವನಾತ್ಮಕ ಪೋಸ್ಟ್ ಹಾಕಿದ್ದಳು. ಆದರೆ ಅದರಲ್ಲಿ ಯಾರ ನಿರ್ದಿಷ್ಟ ಹೆಸರುಗಳನ್ನು ಉಲ್ಲೇಖಿಸಿಲ್ಲ. ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.