September 30, 2026
Wednesday, September 30, 2026
spot_img

Weather | ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ🌧️, ಬೆಂಗಳೂರಿನಲ್ಲಿ ಮೂಡಿ ವೆದರ್‌🌫️!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೆಲವು ದಿನಗಳಿಂದ ರಾಜ್ಯದಲ್ಲಿ ಸಾಧಾರಣ ಮಳೆಯಾಗಿದ್ದು, ಇಂದು ಕೂಡ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಬೆಳಗ್ಗೆಯಿಂದಲೇ ಕೂಲ್‌ ಕೂಲ್‌ ವೈಬ್ಸ್‌ ನೀಡುತ್ತಿದ್ದು, ಆಫೀಸಿಗೆ, ಶಾಲೆಗೆ ಹೋಗುವವರಿಗೆ ಮೂಡೇ ಇಲ್ಲದಂತೆ ಆಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಎಡೆಬಿಡೆ ಮಳೆ ಸುರಿಯಲಿದೆ.

ಆಗಸ್ಟ್ 24ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದೇ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನಲ್ಲಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಸಾಧಾರಣದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ. ಮೈಸೂರು ಮಂದಿ ಕೂಡ ಮೂಡಿ ವೆದರ್‌ನಲ್ಲಿ ಒಂದೊಳ್ಳೆ ಕಾಫಿ ಕುಡಿದು ಎಂಜಾಯ್‌ ಮಾಡ್ತಿದ್ದಾರೆ.

Must Read