March 11, 2026
Wednesday, March 11, 2026
spot_img

WEATHER | ರಾಜ್ಯದ ಕೆಲವೆಡೆ ಸಾಧಾರಣ ಮಳೆ, ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಕ್ಷಿಣ ಒಳನಾಡಿನ ಕೆಲ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿರಲಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದ್ದು, ಚಳಿಯ ಹವಾಮಾನ ಮುಂದುವರಿಯಲಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ತೀರಾ ವಿರಳವಾಗಿರಲಿದ್ದು, ಸಂಪೂರ್ಣವಾಗಿ ಒಣಹವೆ ಇರಲಿದೆ ಮುನ್ಸೂಚನೆ ನೀಡಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಉಳಿದ ಭಾಗಗಳಂತೆ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !