ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ವರದಿ, ಕಾರವಾರ:
ಹೆಣ್ಣು ಮಕ್ಕಳ ಸುರಕ್ಷತಾ ದೃಷ್ಟಿಯಿಂದ ರಾಜ್ಯದ ಹಲವು ನಗರ ಪ್ರದೇಶಗಳಲ್ಲಿ ಆಧುನಿಕ ತಂತ್ರಜ್ಞಾನಗಳ ಸಹಾಯದೊಂದಿಗೆ ಕಾನೂನು ಸುವ್ಯವಸ್ಥೆ ಜಾರಿಗೊಳಸಲಾಗಿದೆ. ಅರಣ್ಯ ಗುಡ್ಡಗಾಡು ಪ್ರದೇಶಗಳನ್ನು ಒಳಗೊಂಡ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂಥ ವ್ಯವಸ್ಥೆ ಕಷ್ಟಕರವಾದರೂ ಹೆಣ್ಣು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಾಜ್ಯದ ಎಲ್ಲಾ ಭಾಗಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಹೊಸ ತಂತ್ರಜ್ಞಾನಗಳ ಅಳವಡಿಕೆ ಮೂಲಕ ಬಲಪಡಿಸುವ ದಿಶೆಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಾನೂನು ಮತ್ತು ಸಣ್ಣ ನೀರಾವರಿ ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದರು.
ಕಾರವಾರದಲ್ಲಿ ಮಾದ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡಿದ ಅವರು ಹೆಣ್ಣು ಮಕ್ಕಳ ರಕ್ಷಣೆಗೆ ಡಿಜಿಟಲ್ ವ್ಯವಸ್ಥೆ ಮೂಲಕ ಹೆಣ್ಣು ಮಕ್ಕಳು ಅತಿ ಹೆಚ್ಚು ನಿಲ್ಲುವ, ಓಡಾಡುವ ಸ್ಥಳಗಳ ಮಾಹಿತಿ ದಾಖಲಿಸಿ , ಸಿ.ಸಿ ಕ್ಯಾಮೆರಾ ಅಳವಡಿಕೆ, ಭದ್ರತಾ ವ್ಯವಸ್ಥೆ ಹೆಚ್ಚಿಸುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.