ಇಂದು ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ ಸೀತಾರಾಮನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಎರಡನೇ ಆವಧಿಯ ಕೊನೆಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ.

ಈ ಬಜೆಟ್ ಮಂಡನೆ ಮೂಲಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೇಶದ ಇತಿಹಾಸದಲ್ಲಿ ಇಂದು ಹೊಸ ದಾಖಲೆ ಬರೆಯಲಿದ್ದಾರೆ. ಇಂದಿರಾ ಗಾಂಧಿ ಬಳಿಕ ಬಜೆಟ್ ಮಂಡಿಸಿದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ಈಗಾಗಲೇ ಪಾತ್ರರಾಗಿರುವ ನಿರ್ಮಲಾ ಸೀತಾರಾಮನ್, ಇದುವರೆಗೆ ಒಟ್ಟು ಐದು ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ.

ಇಂದು ಅವರು ಮಂಡಿಸುತ್ತಿರುವುದು ಆರನೇ ಬಜೆಟ್!

ಇದುವರೆಗೆ ಅತೀ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಮೊರಾರ್ಜಿ ದೇಸಾಯಿ ಅವರ ಖಾತೆಯಲ್ಲಿದೆ. ಅವರು ಸತತ ಆರು ಬಜೆಟ್ ಮಂಡಿದ್ದಾರೆ. ಈ ಪೈಕಿ ಐದು ಪೂರ್ಣ ಹಾಗೂ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್. ಇದಲ್ಲದೆ ಒಟ್ಟು ಅವರು ೧೦ ಬಜೆಟ್ ಮಂಡನೆ ಮಾಡಿದ್ದಾರೆ. ಇನ್ನು ಯಶವಂತ್ ಸಿನ್ಹಾ, ಅರುಣ್ ಜೇಟ್ಲಿ, ಮನಮೋಹನ್ ಸಿಂಗ್, ಪಿ ಚಿದಂಬರಂ ಅವರು ಕೂಡಾ ಸತತವಾಗಿ ಐದು ಬಾರಿ ಬಜೆಟ್ ಮಂಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!