ಹೊಸದಿಗಂತ ಡಿಜಿಟಲ್ ಡೆಸ್ಕ್:
ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಬಳಿಕ, ಕೇಂದ್ರ ಸಚಿವರಾಗಿ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿರುವ ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ (ಎಚ್.ಡಿ.ಕುಮಾರಸ್ವಾಮಿ) ಅವರು ಪ್ರಮಾಣವಚನ ಸ್ವೀಕರಿಸಿದರು.