ಟೀಮ್​ ಇಂಡಿಯಾದ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ ಮೋದಿ, ಅಮಿತ್ ಶಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌(Team India Coach) ಹುದ್ದೆಗೆ ಸೂಕ್ತ ವ್ಯಕ್ತಿಯ ಹುಡುಕಾಟ ನಡೆಯುತ್ತಿದ್ದು, ಈ ಮದ್ಯೆ ಪ್ರಧಾನಿ ನರೇಂದ್ರ ಮೋದಿ, ಸಚಿನ್​ ತೆಂಡೂಲ್ಕರ್​ , ಎಂ.ಎಸ್​ ಧೋನಿ, ಅಮಿತ್ ಶಾ ಸೇರಿ ಹಲವು ಪ್ರಮುಖರು ಅರ್ಜಿ ಸಲ್ಲಿದ್ದಾರೆ.

ಆದ್ರೆ ಅಸಲಿಗೆ ಇವರ್‍ಯಾರು‌ ಈ ಹುದ್ದೆಗೆ ಅರ್ಜಿ ಸಲ್ಲಿಸಿಲ್ಲ. ಬದಲಾಗಿ ನೆಟ್ಟಿಗರು ಇವರ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಅರ್ಜಿ ಸಲ್ಲಿಸಲು ಮೇ 27 ಅಂತಿಮ ಗಡುವಾಗಿತ್ತು. ಹೀಗಾಗಿ ಕೆಲ ನೆಟ್ಟಿಗರು ಮೋದಿ, ಸಚಿನ್​, ಅಮಿತ್ ಶಾ ಹೆಸರಿನಲ್ಲಿ ನಕಲಿ ಅರ್ಜಿಗಳನ್ನು ಸಲ್ಲಿಸಿ ಬಿಸಿಸಿಐಗೆ ಚಕಮ್​ ಕೊಟ್ಟಿದ್ದಾರೆ.

ಇದಕ್ಕೂ ಮುನ್ನ ಅನೇಕ ಕ್ರಿಕೆಟ್​ ಅಭಿಮಾನಿಗಳು(Cricket Fans Apply For India’s Head Coach) ಗೂಗಲ್​ ಅರ್ಜಿ ಪಡೆದುಕೊಂಡು ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತ ಟ್ವೀಟ್​ಗಳು ವೈರಲ್​ ಆಗಿತ್ತು. ಮೂಲಗಳ ಪ್ರಕಾರ ಈಗಾಗಲೇ 3,000 ಅರ್ಜಿಗಳು ಬಂದಿಗೆ ಎಂದು ಹೇಳಲಾಗಿದೆ.

ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಮೂಲಗಳ ಪ್ರಕಾರ ಗೌತಮ್​ ಗಂಭೀರ್​ ಅವರು ಭಾರತ ತಂಡದ ಕೋಚ್ ಆಗುವ ಸಾಧ್ಯತೆ ಕಂಡುಬಂದಿದೆ. ಭಾನುವಾರ ಮುಕ್ತಾಯ ಕಂಡ 17ನೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಕೆಕೆಆರ್​ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಗೌತಮ್​ ಗಂಭೀರ್​ ತಂಡದ ಮೆಂಟರ್​ ಆಗಿದ್ದರು. ಪಂದ್ಯದ ಮುಕ್ತಾಯದ ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಗಂಭೀರ್​ ಜತೆ ಅತ್ಯಂತ ಆತ್ಮೀಯವಾಗಿ ಸುರ್ದೀಘ ಚರ್ಚೆ ಕೂಡ ನಡೆಸಿದ್ದರು. ಇದನ್ನೆಲ್ಲ ನೋಡುವಾಗ ಗಂಭೀರ್​ ಕೋಚ್​ ಆಗುವುದು ಬಹುತೇಖ ಖಚಿತವಾದಂತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. ಇಬ್ಬರೂ ಅರ್ಜಿ ಸಲ್ಲಿದ್ದೇ ಆದರೆ,, ಹತ್ತು ವರ್ಷಗಳಲ್ಲಿ ದೇಶದ ಎಲ್ಲ ವ್ಯವಸ್ಥೆಗಳನ್ನು ಹಳ್ಳ ಹಿಡಿಸಿದಂತೆ,, ಕ್ರಿಕೆಟ್ ಸಹ ಮುಂಡಾಮುಚ್ಚುವರು

LEAVE A REPLY

Please enter your comment!
Please enter your name here

error: Content is protected !!