ಗೋವಾದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಪ್ರಚಾರ : ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೋವಾ ವಿಧಾನಸಭೆ ಚುನಾವಣೆಗೆ ಇನ್ನೇನು ವಾರ ಬಾಕಿ ಇದ್ದು, ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರನ್ನು ಪ್ರಚಾರಕ್ಕೆ ಕರೆತರುತ್ತಿದೆ. ಗೋವಾದಲ್ಲಿ ನಾಯಕರು ಪ್ರಚಾರ ರ‍್ಯಾಲಿಗಳಲ್ಲಿ ಭಾಗಿಯಾಗಲಿದ್ದು, ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

40 ಸ್ಥಾನಗಳ ಗೋವಾ ವಿಧಾನಸಭೆಗೆ ಫೆ.14 ರಂದು ಮತದಾನ ನಡೆಯಲಿದೆ. ಇಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದೆ. ಪ್ರಧಾನಿ ಮೋದಿ, ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ರಾಜನಾಥ್ ಸಿಂಗ್ ಸೇರಿ ಹಲವು ಗಣ್ಯರು ಸಾರ್ವಜನಿಕ ಸಭೆಯಲ್ಲಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಈ ಬಗ್ಗೆ ಗೋವಾ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸದಾನಂದ ಶೇಟ್ ತಾನಾವಡೆ ಮಾತನಾಡಿದ್ದು, ಪಕ್ಷದ ಅಭ್ಯರ್ಥಿಗಳ ಪರ ಪ್ರಧಾನಿ ಮೋದಿ ಅವರು ಫೆ.10 ರಂದು ಮಾಫುಸಾದಲ್ಲಿ ನಡೆಯುವ ಬೃಹತ್ ರ‍್ಯಾಲಿಯಲ್ಲಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!