Monday, November 10, 2025

ರಷ್ಯಾದಿಂದ ತೈಲ ಖರೀದಿಸಲ್ಲ ಎಂದು ಟ್ರಂಪ್ ಗೆ ಮೋದಿ ಭರವಸೆ?: ಭಾರತದ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ನರೇಂದ್ರ ಮೋದಿ ತಮಗೆ ಭರವಸೆ ನೀಡಿದ್ದಾರೆ ಎಂದು ಡೊನಾಲ್ಡ್ ಟ್ರಂಪ್ ಮಾತಿಗೆ ಭಾರತ ಅಧಿಕೃತವಾಗಿ ಪ್ರತಿಕ್ರಿಯಿಸಿದೆ.

ಭಾರತೀಯ ಗ್ರಾಹಕನ ಹಿತಾಸಕ್ತಿಯ ರಕ್ಷಣೆಯೇ ಸರ್ಕಾರದ ಆದ್ಯತೆಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

ಭಾರತ ತೈಲ ಮತ್ತು ಅನಿಲದ ಗಮನಾರ್ಹ ಆಮದುದಾರ. ಅಸ್ಥಿರ ಇಂಧನದ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ನಮ್ಮ ಸ್ಥಿರ ಆದ್ಯತೆಯಾಗಿದೆ. ನಮ್ಮ ಆಮದು ನೀತಿಗಳು ಸಂಪೂರ್ಣವಾಗಿ ಈ ಉದ್ದೇಶದಿಂದ ನಿರೂಪಿತವಾಗಿರುತ್ತವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸ್ಥಿರ ಇಂಧನ ಬೆಲೆಗಳು ಮತ್ತು ಸುರಕ್ಷಿತ ಪೂರೈಕೆ ಖಾತ್ರಿ ನಮ್ಮ ಇಂಧನ ನೀತಿಯ ಅವಳಿ ಗುರಿಗಳಾಗಿವೆ. ಇದು ನಮ್ಮ ಇಂಧನ ಮೂಲ ಮತ್ತು ಮಾರುಕಟ್ಟೆ ಪರಿಸ್ಥಿತಿಯನ್ನು ಆಧರಿಸುತ್ತದೆ. ಅಮೆರಿಕ ಕಾಳಜಿ ವಹಿಸುತ್ತಿರುವಂತೆ ನಾವು ನಮ್ಮ ಇಂಧನ ಸಂಗ್ರಹಣೆಯನ್ನು ವಿಸ್ತರಿಸಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದೇವೆ. ಇದು ಕಳೆದ ದಶಕದಲ್ಲಿ ಸ್ಥಿರವಾಗಿ ಪ್ರಗತಿ ಸಾಧಿಸಿದೆ. ಹಾಲಿ ಸರ್ಕಾರ ಭಾರತದೊಂದಿಗೆ ಇಂಧನ ಸಹಕಾರವನ್ನು ಮತ್ತಷ್ಟು ಉತ್ತಮಗೊಳಿಸಲು ಆಸಕ್ತಿಯನ್ನು ತೋರಿಸಿದೆ. ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿಕೆಯಲ್ಲಿ ಅವರು ಹೇಳಿದ್ದಾರೆ.

error: Content is protected !!