ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಕೇಶ್ ಅಂಬಾನಿ-ನೀತಾ ಅಂಬಾನಿ ದಂಪತಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ವಿವಾಹವು ಶುಕ್ರವಾರ (ಜುಲೈ 12) ಅದ್ಧೂರಿಯಾಗಿ ನಡೆದಿದೆ. ದೇಶ-ವಿದೇಶಗಳ ಗಣ್ಯರು, ಸೆಲೆಬ್ರಿಟಿಗಳು, ರಾಜಕಾರಣಿಗಳು ಶನಿವಾರದ ಶುಭ ಆಶೀರ್ವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದು, ನೂತನ ವಧು-ವರರಿಗೆ ಆಶೀರ್ವಾದ ಮಾಡಿದರು.
ಪ್ರಧಾನಿ ಮೋದಿ ಅವರು ಜಿಯೋ ವರ್ಲ್ಡ್ ಕನ್ವೆನ್ಶನ್ ಸೆಂಟರ್‌ಗೆ ಆಗಮಿಸುತ್ತಲೇ ಮುಕೇಶ್ ಅಂಬಾನಿ ಅವರು ಸ್ವಾಗತಿಸಿದರು. ಇದಾದ ಬಳಿಕ ಮೋದಿ ಅವರು ನೂತನ ವಧು-ವರರಿಗೆ ಆಶೀರ್ವಾದ ಮಾಡಿದರು. ಇದಾದ ಬಳಿಕ ಅನಂತ್ ಅಂಬಾನಿ ಹಾಗೂ ಆಕಾಶ್ ಅಂಬಾನಿ ಅವರು ಮೋದಿ ಅವರ ಕಾಲಿಗೆ ನಮಸ್ಕರಿಸಿದರು.