Monday, September 22, 2025

ಮೋದಿಗೆ ನೇಪಾಳ ಹಂಗಾಮಿ ಪ್ರಧಾನಿ ಕರ್ಕಿ ಕರೆ: ಶಾಂತಿ ಪುನಃಸ್ಥಾಪಿಸಲು ಇರಲಿದೆ ಭಾರತದ ಬೆಂಬಲ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನೇಪಾಳ ಹಂಗಾಮಿ ಪ್ರಧಾನಿ ಸುಶೀಲಾ ಕರ್ಕಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಗುರುವಾರ) ದೂರವಾಣಿಯಲ್ಲಿ ಮಾತನಾಡಿದ್ದಾರೆ.

ಈ ವೇಳೆ ಇತ್ತೀಚಿನ ಪ್ರತಿಭಟನೆಯ ನಡುವೆ ದೇಶದಲ್ಲಿ ಸಂಭವಿಸಿದ ಜೀವಹಾನಿಗೆ ಅವರು ಸಂತಾಪ ಸೂಚಿಸಿದ್ದಾರೆ. ಜೊತೆಗೆ ಸೆಪ್ಟೆಂಬರ್ 19ರಂದು ನಡೆಯಲಿರುವ ನೇಪಾಳದ ರಾಷ್ಟ್ರೀಯ ದಿನಕ್ಕೆ ಶುಭಾಶಯ ಕೋರಿದ್ದಾರೆ.

‘ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಿ ಸುಶೀಲಾ ಕರ್ಕಿ ಅವರೊಂದಿಗೆ ಮಾತುಕತೆ ನಡೆಸಿದೆ. ಇತ್ತೀಚಿನ ದುರಂತ ಜೀವಹಾನಿಗೆ ಸಂತಾಪ ಸೂಚಿಸಿದೆ . ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸಲು ನೇಪಾಳ ಮಾಡುವ ಪ್ರಯತ್ನಗಳಿಗೆ ಭಾರತದ ದೃಢ ಬೆಂಬಲವನ್ನು ಪುನರುಚ್ಚರಿಸಿದೆ’ ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಜೊತೆಗೆ ನಾಳೆಯ ರಾಷ್ಟ್ರೀಯ ದಿನದಂದು ನಾನು ಅವರಿಗೆ ಮತ್ತು ನೇಪಾಳದ ಜನರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದ್ದೇನೆ’ ಎಂದು ಮೋದಿ ಹೇಳಿದ್ದಾರೆ.

ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಸೇರಿದಂತೆ ಹಲವಾರು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸುವ ಸರ್ಕಾರದ ನಿರ್ಧಾರದ ನಂತರ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದವು. ಭಾನುವಾರ, ಸೆಪ್ಟೆಂಬರ್ 8 ಮತ್ತು 9ರಂದು ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟವರನ್ನು’ಹುತಾತ್ಮರು’ ಎಂದು ಘೋಷಿಸಲಾಗುವುದು ಎಂದು ಪ್ರಧಾನಿ ಸುಶೀಲಾ ಕರ್ಕಿ ಘೋಷಿಸಿದ್ದಾರೆ.

ಇದನ್ನೂ ಓದಿ