ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರವಾಸದಲ್ಲಿ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. ಸದ್ಯ ಹಿಮಾಚಲ ಪ್ರದೇಶದ ಹಲವು ಭಾಗಗಳಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ಹಿಮಾಚಲ ಪ್ರದೇಶದ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಸುಂದರ ಹಿಮಾಚಲ ಪ್ರದೇಶ! ಬಿರುಸಿನ ಚುನಾವಣಾ ಪ್ರಚಾರದ ನಡುವೆಯೂ ಸುಂದರ ಪ್ರಕೃತಿಯ ದರ್ಶನವಾಯಿತು. ನಾನು ಹಿಮಾಚಲದಲ್ಲಿದ್ದೇನೆ ಮತ್ತು ಹಿಮಾಚಲದಲ್ಲಿರುವ ನಾನು ಇಲ್ಲಿಗೆ ಈ ಹಿಂದೆ ಬಂದಾಗಿನ ಭೇಟಿಗಳ ನೆನಪುಗಳನ್ನು ಮೆಲುಕು ಹಾಕುತ್ತಿದ್ದೇನೆ. ಪ್ರಧಾನಿ ಮೋದಿ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಈ ರಾಜ್ಯದೊಂದಿಗೆ ತಮ್ಮ ಸಂಬಂಧ ತುಂಬಾ ಗಟ್ಟಿಯಾಗಿದೆ ಎಂದು ಬರೆದುಕೊಂಡಿದ್ದಾರೆ.
ಹಿಮಾಚಲ ಪ್ರದೇಶವು ಜನಪ್ರಿಯ ಪ್ರವಾಸಿ ತಾಣವಾಗಿದ್ದು, ರಾಜ್ಯದ ಭವಿಷ್ಯದ ಬಗ್ಗೆ ನಿರೀಕ್ಷೆ ಮತ್ತು ಉತ್ಸಾಹವನ್ನು ಪ್ರೇರೇಪಿಸುತ್ತದೆ. ಹಿಮಾಚಲ ಪ್ರದೇಶವು ತನ್ನ ಭೂದೃಶ್ಯ, ಶ್ರೀಮಂತ ಸಂಸ್ಕೃತಿ ಮತ್ತು ಸುಸ್ಥಿರತೆಯ ಬದ್ಧತೆಯಿಂದ ಪ್ರಪಂಚದಾದ್ಯಂತದ ಪ್ರಯಾಣಿಕರ ಹೃದಯವನ್ನು ಗೆಲ್ಲುತ್ತದೆ. ಇದು ವಿಶ್ವದ ಅತ್ಯುತ್ತಮ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ ಎಂದು ಪರಿಗಣಿಸಲಾಗಿದೆ.