ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಸಭೆ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಸಿಎಂ ಬಸವರಾಜ ಬೊಮ್ಮಾಯಿಗೆ ಕರೆ ಮಾಡಿ, ಅಭಿನಂದನೆಯನ್ನು ತಿಳಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆಯ ಮೂಲಕ ಮೂವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಯಶಸ್ವಿಯಾಗಿದಕ್ಕೆ ದೂರವಾಣಿ ಮೂಲಕ ಶುಭಾಶಯ ಕೋರಿ ಶ್ಲಾಘಿಸಿದರು ಎಂದು ತಿಳಿಸಿದ್ದಾರೆ.