ಬ್ರಿಟನ್‌ನಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ: ಇಂದೇ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಾಲ್ಕು ದಿನಗಳ ಕಾಲ ಲಂಡನ್‌, ಮಾಲ್ದೀವ್ಸ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಡರಾತ್ರಿ ಬಿಟನ್‌ಗೆ ಬಂದಿಳಿದಿದ್ದಾರೆ. ಈ ವೇಳೆ ಪ್ರಧಾನಿ ಮೋದಿಗೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾಮರ್‌ ಸಾಂಪ್ರದಾಯಿಕ ಸ್ವಾಗತ ಕೋರಿದ್ದಾರೆ. ಇದೇ ವೇಳೆ ಅಲ್ಲಿನ ಭಾರತೀಯ ಸಮೂಹವನ್ನು ಭೇಟಿಯಾದ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.

2 ದಿನಗಳ ಕಾಲ ಬ್ರಿಟನ್‌ ಪ್ರವಾಸದಲ್ಲಿರುವ ಮೋದಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಗುರಿ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಇಂದು ಕೀರ್‌ ಸ್ಟಾಮರ್‌ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದಕ್ಕೆ ಅಂತಿಮ ಸಹಿ ಹಾಕುವ ಸಾಧ್ಯತೆ ಇದೆ. ಮೂರು ವರ್ಷಗಳ ಚರ್ಚೆಯ ಬಳಿಕ ಮೇ ತಿಂಗಳಲ್ಲಿ ಒಪ್ಪಂದಕ್ಕೆ ಅಂತಿಮ ರೂಪ ನೀಡಲಾಗಿದ್ದು, ಇದು ಭಾರತದ ಶೇ.99 ರಷ್ಟು ರಫ್ತುಗಳ ಮೇಲಿನ ಸುಂಕವನ್ನು ತೆಗೆದುಹಾಕಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!