ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ನೀಡಿದ್ದು ಮೋದಿ ಸರಕಾರ: ಸ್ಟ್ಯಾಲಿನ್ ಟೀಕೆಗೆ ಅಮಿತ್ ಶಾ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಪ್ರಯತ್ನ ಮಾಡಲಾಗುತ್ತಿದೆ ಎಂಬ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್ ಆರೋಪಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.

ತಮಿಳುನಾಡಿನಲ್ಲಿ ಎನ್ ಇಪಿ ಅಡಿಯಲ್ಲಿ ಹಿಂದಿಯನ್ನು ತೃತೀಯ ಭಾಷೆಯನ್ನಾಗಿ ಕಲಿಯಲು ಅವಕಾಶ ನೀಡದೇ ಇದ್ದರೆ ಅನುದಾನ ಕೊಡುವುದಿಲ್ಲ ಎಂಬ ಹೇಳಿದ್ದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಸ್ಟ್ಯಾಲಿನ್,ಎಲ್ ಕೆಜಿ ವಿದ್ಯಾರ್ಥಿಯೊಬ್ಬ ಪಿ ಹೆಚ್ ಡಿ ಪದವೀಧರನಿಗೆ ಪಾಠ ಮಾಡುತ್ತಿರುವಂತಿದೆ. ದ್ರಾವಿಡಂ ದೆಹಲಿಯಿಂದ ಆಜ್ಞೆಗಳನ್ನು ತೆಗೆದುಕೊಳ್ಳುವುದಿಲ್ಲ. ಬದಲಾಗಿ, ಅದು ರಾಷ್ಟ್ರವು ಅನುಸರಿಸಬೇಕಾದ ಮಾರ್ಗವನ್ನು ನಿಗದಿಪಡಿಸುತ್ತದೆ ಎಂದು ಸ್ಟ್ಯಾಲಿನ್ ಹೇಳಿದ್ದರು.

ಇದೀಗ ಸ್ಟ್ಯಾಲಿನ್ ಹೇಳಿಕೆಗೆ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರ ತಮಿಳಿನಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಪರಿಚಯಿಸಬೇಕು. ಡಿಎಂಕೆ ಮುಖ್ಯಸ್ಥರು ಈ ನಿಟ್ಟಿನಲ್ಲಿಕೆಲಸ ಮಾಡಿಲ್ಲ ಮತ್ತು ಪ್ರಾದೇಶಿಕ ಭಾಷೆಗಳಿಗೆ ಅವಕಾಶ ಕಲ್ಪಿಸಲು ನೇಮಕಾತಿ ನೀತಿಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ .

ಈ ಹಿಂದೆ ಸಿಎಪಿಎಫ್ ನೇಮಕಾತಿಯಲ್ಲಿ ಮಾತೃಭಾಷೆಗೆ ಸ್ಥಾನವಿರಲಿಲ್ಲ. ಆದ್ರೆ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಯುವಕರು ಈಗ ತಮಿಳು ಸೇರಿದಂತೆ ಎಲ್ಲಾ ಸ್ಥಳೀಯ ಭಾಷೆಗಳಲ್ಲಿ ತಮ್ಮ ಸಿಎಪಿಎಫ್ ಪರೀಕ್ಷೆಯನ್ನು ಬರೆಯಲು ಸಾಧ್ಯವಾಗುವಂತೆ ಮಾಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!