ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯದಶಮಿಯ ಮುನ್ನ ದಿನ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಗಿಫ್ಟ್ ನೀಡಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ 3% ತುಟ್ಟಿ ಭತ್ಯೆ (Dearness Allowance) ನೀಡಲು ಒಪ್ಪಿಗೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಬೆಲೆ ಏರಿಕೆಯನ್ನು ಸರಿದೂಗಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿ ಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ ನೀಡಲು ಅನುಮೋದನೆ ನೀಡಿದೆ.
ಈ ವರ್ಷದಲ್ಲಿ ಮಾರ್ಚ್ ತಿಂಗಳಿನಲ್ಲಿ 2% ರಷ್ಟು ಡಿಎ ಏರಿಕೆ ಮಾಡಲಾಗಿತ್ತು. ಈಗ ಮೊತ್ತೊಮ್ಮೆ ಡಿಕೆ ಏರಿಕೆ ಮಾಡಿ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಎರಡರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ಒಟ್ಟಾರೆಯಾಗಿ ವಾರ್ಷಿಕ 1,0083.96 ಕೋಟಿ ಹೊರೆ ಬೀಳಲಿದೆ.