BIG NEWS| ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ ಮೋದಿ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳವಾರ ದೆಹಲಿಯ ನೂತನ ಸಂಸತ್ ಭವನದ ಲೋಕಸಭೆಯಲ್ಲಿ ನರೇಂದ್ರ ಮೋದಿ ಸರ್ಕಾರ ಹೊಸ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿತು. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೊಸ ಸಂಸತ್ ಭವನದ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಿದರು.

ಇದನ್ನು ನಾರಿ ಶಕ್ತಿ ವಂದನ್ ಅಧಿನಿಯಂ ಎಂದು ಕರೆದ ಅವರು, ಒಮ್ಮೆ ಈ ಮಸೂದೆ ಅಂಗೀಕಾರವಾದರೆ, ಲೋಕಸಭೆಯಲ್ಲಿ ಮಹಿಳೆಯರ ಸ್ಥಾನಗಳ ಸಂಖ್ಯೆ 181 ಕ್ಕೆ ಏರಲಿದೆ.

ಸದನದಲ್ಲಿ ವಿಧೇಯಕವನ್ನು ಅಂಗೀಕರಿಸುವ ಚರ್ಚೆಯನ್ನು ನಾಳೆ ಸೆಪ್ಟೆಂಬರ್ 20 ರಂದು ನಡೆಸಲಾಗುವುದು. ಸೆಪ್ಟೆಂಬರ್ 21 ರಂದು ರಾಜ್ಯಸಭೆಯಲ್ಲಿ ಮಸೂದೆಯನ್ನು ಕೈಗೆತ್ತಿಕೊಳ್ಳಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!