ದೆಹಲಿ ಏರ್‌ಪೋರ್ಟ್‌ ಮೇಲ್ಛಾವಣಿ ಕುಸಿತಕ್ಕೆ ಮೋದಿ ಸರ್ಕಾರವೇ ಕಾರಣ: ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೆಹಲಿ ಏರ್‌ಪೋರ್ಟ್‌ ಮೇಲ್ಛಾವಣಿ ಕುಸಿತಕ್ಕೆ ಮೋದಿ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಮೇಲ್ಛಾವಣಿ ಕುಸಿತಕ್ಕೆ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ಕಾರಣ, ಭ್ರಷ್ಟ, ಅಸಮರ್ಥ ಮತ್ತು ಸ್ವಾರ್ಥಿ ಸರ್ಕಾರದ ಕ್ರಮಗಳಿಂದಾಗಿ ಸಂತ್ರಸ್ತರು ಈ ಸ್ಥಿತಿ ಅನುಭವಿಸಬೇಕಾಯಿತು ಎಂದಿದ್ದಾರೆ.

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1 ಬಳಿ ಕಟ್ಟಡವನ್ನು ಉದ್ಘಾಟಿಸಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಹೊಗಳಿದ್ದರು. ಆದರೆ ಕೆಲವೇ ತಿಂಗಳುಗಳಲ್ಲಿ ನಿಜ ಎಲ್ಲರಿಗೂ ಗೊತ್ತಾಗುತ್ತಿದೆ ಎಂದಿದ್ದಾರೆ.

ದೆಹಲಿಯಲ್ಲಿ  ಭಾರೀ ಮಳೆಯ ನಡುವೆ ಟರ್ಮಿನಲ್ 1 ರ ಮೇಲ್ಛಾವಣಿ  ಕುಸಿದು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!