ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ ಬೆಲೆಯನ್ನು ಇಳಿಸಿದೆ.

ಔಷಧಗಳ ಬೆಲೆ ಇಳಿಕೆ (Medicine Price) ಮಾಡಿ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು (NPPA) ಆದೇಶ ಹೊರಡಿಸಿದೆ. ಇದರಿಂದ ದೇಶಾದ್ಯಂತ ಕೋಟ್ಯಂತರ ಜನರು ಕಡಿಮೆ ಬೆಲೆಗೆ ಔಷಧಗಳನ್ನು ಖರೀದಿಸಬಹುದಾಗಿದೆ.

ಯಾವ ಕಾಯಿಲೆಗಳ ಔಷಧ ಬೆಲೆ ಇಳಿಕೆ?
ಮಧುಮೇಹ, ಹೃದ್ರೋಗ, ಯಕೃತ್ತಿನ ಸಮಸ್ಯೆ, ಆ್ಯಂಟಿಬಯೋಟಿಕ್ಸ್‌, ಮಲ್ಟಿ ವಿಟಮಿನ್‌ ಸೇರಿ ಹಲವು ಔಷಧಗಳ ಬೆಲೆಯನ್ನು ಎನ್‌ಪಿಪಿಎ ಇಳಿಕೆ ಮಾಡಿದೆ.

ಭಾರತದಲ್ಲಿ 10 ಕೋಟಿಗೂ ಅಧಿಕ ಮಂದಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜಗತ್ತಿನಲ್ಲೇ ಅತಿ ಹೆಚ್ಚು ಮಧುಮೇಹಿಗಳು ಇರುವ ದೇಶಗಳಲ್ಲಿ ಭಾರತವೂ ಸೇರಿದೆ. ಹಾಗಾಗಿ, ಸಕ್ಕರೆ ಕಾಯಿಲೆಗೆ ಬಳಸುವ ಮಾತ್ರೆಗಳು ಹಾಗೂ ಇನ್ಸುಲಿನ್‌ಗಳ ಬೆಲೆಯನ್ನು ಇಳಿಕೆ ಮಾಡಿರುವುದು ಕೋಟ್ಯಂತರ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

“ಸಾರ್ವಜನಿಕರಿಗೆ ಅನುಕೂಲವಾಗುವ ಔಷಧಗಳ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಬೆಲೆ ಇಳಿಕೆಯು ಒಂದು ನಿಯಮಿತ ಪ್ರಕ್ರಿಯೆಯಾಗಿದ್ದು, ಪ್ರಾಧಿಕಾರವು ಅದನ್ನು ಅನುಸರಿಸಿದೆ” ಎಂದು ಎನ್‌ಪಿಪಿಎ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ರಕ್ತದ ಗ್ಲುಕೋಸ್‌ ಕಡಿಮೆಯಾದಾಗ ಬಳಿಸುವ Dapagliflozin Metformin Hydrochlorideಗೆ ಮೊದಲು 30 ರೂ. ಇತ್ತು. ಈಗ ಅದಕ್ಕೆ 16 ರೂ. ನಿಗದಿಪಡಿಸಲಾಗಿದೆ. ಅಸ್ತಮಾ ಹಾಗೂ ಶ್ವಾಸಕೋಶದ ಸಮಸ್ಯೆ ಇದ್ದವರು ತೆಗೆದುಕೊಳ್ಳವ ಬ್ಯೂಡ್‌ಸೊನೈಡ್‌ ಹಾಗೂ ಫಾರ್ಮೊಟೆರೋಲ್‌ನ ಒಂದು ಡೋಸ್‌ ಬೆಲೆಯನ್ನು 6.62 ರೂ.ಗೆ ಇಳಿಕೆ ಮಾಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!