ನಾಳೆ ಮೋದಿ ಸರಕಾರದ ಬಜೆಟ್: ಜನತೆಯಲ್ಲಿ ಹೊಸ ನಿರೀಕ್ಷೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಪ್ರಧಾನಿ ಮೋದಿ ನೇತೃತ್ವದ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಗಳವಾರ (ಜುಲೈ 22) ಮಂಡಿಸಲಿದ್ದಾರೆ.

ಉದ್ಯೋಗಿಗಳು, ಬಡವರು, ಉದ್ಯಮಿಗಳಿಂದ ಹಿಡಿದು ಪ್ರತಿಯೊಬ್ಬರ ಗಮನವೂ ಕೇಂದ್ರ ಸರ್ಕಾರದ ಬಜೆಟ್‌ ಮೇಲಿದೆ. ಮಂಗಳವಾರ ಬೆಳಗ್ಗೆ 11 ಗಂಟೆಗೇ ನಿರ್ಮಲಾ ಸೀತಾರಾಮನ್‌ ಅವರು ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಪೂರ್ಣಪ್ರಮಾಣದ ಬಜೆಟ್‌ ಮಂಡಿಸುವ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!