ಮೋದಿ ಸರ್ಕಾರದಿಂದ ಜನತೆಗೆ ಗಿಫ್ಟ್: ಉಚಿತ ಪಡಿತರ ಯೋಜನೆ ಇನ್ನೂ ಒಂದು ವರ್ಷಕ್ಕೆ ವಿಸ್ತರಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಕೊರೋನಾ ವೇಳೆ ಆರಂಭಿಸಿದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಭಾಗ್ಯ ಯೋಜನೆಯನ್ನು ಮತ್ತೊಂದು ವರ್ಷಕ್ಕೆ ವಿಸ್ತರಿಸಲಾಗಿದೆ.

ಈ ಮೂಲಕ ಬರೋಬ್ಬರಿ 80 ಕೋಟಿ ಮಂದಿಗೆ ಉಚಿತ ಪಡಿತರ ವಿತರಿಸಲಾಗುತ್ತಿದೆ. ಡಿಸೆಂಬರ್ 2022ರ ಅಂತ್ಯಕ್ಕೆ ಮುಗಿಯಬೇಕಿದ್ದ ಈ ಯೋಜನೆಯನ್ನು ಇದೀಗ 2023ರ ಡಿಸೆಂಬರ್ 2023ರ ವರೆಗೆ ವಿಸ್ತರಿಸಲಾಗಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಅನ್ನ ಭಾಗ್ಯ ಯೋಜನೆ ವಿಸ್ತರಿಸುವ ಮೂಲಕ ಮತ್ತೆ ಜನರ ಸಂಕಷ್ಟಕ್ಕೆ ಮೋದಿ ಸರ್ಕಾರ ನೆರವಾಗಿದೆ. ಈ ಯೋಜನೆ ವಿಸ್ತರಣೆಯಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 2 ಲಕ್ಷ ಕೋಟಿ ರೂಪಾಯಿ ಹೊರೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!