August 27, 2026
Thursday, August 27, 2026
spot_img

ಪರೀಕ್ಷಾ ಪಾರದರ್ಶಕತೆಗೆ ಮೋದಿ ಸರ್ಕಾರ ಮಾಸ್ಟರ್ ಪ್ಲಾನ್: ‘ಸಾರ್ವಜನಿಕ ಪರೀಕ್ಷಾ ತಡೆ ಕಾಯ್ದೆ 2024’ ಜಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಪರೀಕ್ಷೆಗಳ ಪಾರದರ್ಶಕತೆ ಕಾಯ್ದುಕೊಳ್ಳಲು ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯುವ ಉದ್ದೇಶದಿಂದ “ಪಬ್ಲಿಕ್ ಎಕ್ಸಾಮಿನೇಷನ್ ಪ್ರಿವೆನ್ಷನ್ ಆಫ್ ಅನ್‌ಫೇರ್ ಮೀನ್ಸ್ ಆಕ್ಟ್, 2024” ಅನ್ನು ಜಾರಿಗೆ ತರಲಾಗಿದೆ ಎಂದರು.

10 ವರ್ಷ ಜೈಲು ಶಿಕ್ಷೆ ಮತ್ತು ₹10 ಕೋಟಿ ದಂಡ

ಹೊಸ ಕಾನೂನಿನ ಪ್ರಕಾರ, ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ಅಕ್ರಮಗಳಲ್ಲಿ ಭಾಗಿಯಾಗುವವರಿಗೆ ಶಿಕ್ಷೆಯ ಪ್ರಮಾಣವನ್ನು 5 ವರ್ಷಗಳಿಂದ 10 ವರ್ಷಗಳಿಗೆ పెంచಲಾಗಿದೆ. ಇದರೊಂದಿಗೆ ಕನಿಷ್ಠ 10 ಕೋಟಿ ರೂಪಾಯಿ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಅಕ್ರಮ ಎಸಗಿದವರ ಮೇಲೆ ಜಾಮೀನು ರಹಿತ ಪ್ರಕರಣಗಳನ್ನು (Non-bailable case) ದಾಖಲಿಸಿ ಬಂದಿಸಲಾಗುತ್ತಿದೆ.

ವಿದ್ಯಾರ್ಥಿಗಳ ಹಿತರಕ್ಷಣೆಗೆ ಪ್ರಥಮ ಆದ್ಯತೆ

ಹಿಂದಿನ ಸರ್ಕಾರಗಳ ಅವಧಿಯಲ್ಲಿ 58 ಕ್ಕೂ ಹೆಚ್ಚು ಬಾರಿ ಯುಪಿಎಸ್‌ಸಿ ಪರೀಕ್ಷಾ ಪತ್ರಿಕೆಗಳು ಸೋರಿಕೆಯಾಗಿದ್ದರೂ ಸೂಕ್ತ ಕ್ರಮ ಕೈಗೊಂಡಿರಲಿಲ್ಲ ಎಂದು ಜೋಶಿ ಆರೋಪಿಸಿದರು. ಆದರೆ ಪ್ರಸ್ತುತ ಸರ್ಕಾರ ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, 22 ಲಕ್ಷ ವಿದ್ಯಾರ್ಥಿಗಳಿಗೆ ಮರು ನೀಟ್ (NEET) ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳ ಹಿತರಕ್ಷಣೆ ಮಾಡಿದೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !