ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ‌ʼಏಮ್ಸ್ʼ ಉದ್ಘಾಟಿಸಿದ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿಮಾಚಲ ಪ್ರದೇಶದ ಭೇಟಿಯಲ್ಲಿರುವ ಪ್ರಧಾನಿ ಮೋದಿಯವರು ಇಲ್ಲಿನ ಬಿಲಾಸ್‌ಪುರದಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಅನ್ನು ಉದ್ಘಾಟನೆ ಮಾಡಿದ್ದಾರೆ. ಆರೋಗ್ಯ ಸೇವೆಗಳನ್ನು ಬಲಪಡಿಸುವ ಉದ್ದೇಶದಿಂದ ಸುಮಾರು 1,470 ಕೋಟಿ ರೂ. ವೆಚ್ಚದಲ್ಲಿ ಈ ಏಮ್ಸ್‌ ಅನ್ನು ನಿರ್ಮಿಸಲಾಗಿದೆ.

ತಮ್ಮ ಭೇಟಿಯ ಇತರ ಭಾಗವಾಗಿ, ಅವರು 3,650 ಕೋಟಿರೂ.ಗೂ ಹೆಚ್ಚು ಮೊತ್ತದ ಯೋಜನೆಗಳ ಶಂಕುಸ್ಥಾಪನೆ, 1,690 ಕೋಟಿ ರೂ. ಮೌಲ್ಯದ ರಾಷ್ಟ್ರೀಯ ಹೆದ್ದಾರಿಯ ಮತ್ತೊಂದು ಯೋಜನೆ, ನಾಲಾಘರ್‌ನಲ್ಲಿ ವೈದ್ಯಕೀಯ ಸಾಧನ ಉದ್ಯಾನವನ ಮತ್ತು ಬಾಂಡ್ಲಾದಲ್ಲಿ ಸರ್ಕಾರಿ ಹೈಡ್ರೋ ಎಂಜಿನಿಯರಿಂಗ್ ಕಾಲೇಜನ್ನು ಉದ್ಘಾಟಿಸಲಿದ್ದಾರೆ.

ತಮ್ಮ ಮೊದಲ ಅಧಿಕಾರಾವಧಿಯಲ್ಲಿಯೇ ಮೋದಿಯವರು ಈ ಆಸ್ಪತ್ರೆಗೆ ಶಂಕು ಸ್ಥಾಪನೆ ಮಾಡಿದ್ದರು. ಇದು 18 ಮಾಡ್ಯುಲರ್ ಆಪರೇಷನ್ ಥಿಯೇಟರ್‌ಗಳ ಜೊತೆಗೆ 18 ವಿಶೇಷ ಮತ್ತು 17 ಸೂಪರ್ ಸ್ಪೆಷಾಲಿಟಿ ವಿಭಾಗಗಳನ್ನು ಹೊಂದಿದೆ. ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ (PMSSY) ಅಡಿಯಲ್ಲಿ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ ಮತ್ತು 750 ಹಾಸಿಗೆಗಳ ಸಾಮರ್ಥ್ಯವನ್ನು ಹೊಂದಿದೆ ಅದರಲ್ಲಿ 64 ತೀವ್ರ ನಿಗಾ ಘಟಕ (ICU) ಹಾಸಿಗೆಗಳು. ಒಟ್ಟೂ 1,470 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿದ್ದು, 247 ಎಕರೆ ಪ್ರದೇಶದಲ್ಲಿ 24 ಗಂಟೆಗಳ ತುರ್ತು ಮತ್ತು ಡಯಾಲಿಸಿಸ್ ಸೌಲಭ್ಯಗಳು, ಆಧುನಿಕ ರೋಗನಿರ್ಣಯ ಯಂತ್ರಗಳನ್ನು ಹೊಂದಿದೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!