ಭಾರತೀಯ ವಿಜ್ಞಾನ ಸಂಸ್ಥೆಯ ಮೆದುಳು ತರಬೇತಿ ಕೇಂದ್ರಕ್ಕೆ ಪ್ರಧಾನಿ ಮೋದಿ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಯಲಹಂಕ ವಾಯುನೆಲೆಯ ಮೂಲಕ ಬೆಂಗಳೂರಿಗೆ ಬಂದಿಳಿದಿರುವ ಪ್ರಧಾನಿ ಮೋದಿ ಸಿ.ವಿ. ರಾಮನ್‌ ರಸ್ತೆಯ ಬಳಿಯಿರುವ ಭಾರತೀಯ ವಿಜ್ಞಾನ ಸಂಸ್ಥೆ (IISc)ಯಲ್ಲಿ ಮೆದುಳು ಸಂಶೋಧನಾ ಕೇಂದ್ರವನ್ನು (CBR) ಉದ್ಘಾಟಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್‌ ಚಂದ್ರ ಗೆಹ್ಲೋಟ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಐಐಎಸ್‌ಸಿ ಸಿಬ್ಬಂದಿಯೊಂದಿಗೆ ಪಿಎಂ ಸಮಾಲೋಚನೆ ನಡೆಸಿದ್ದಾರೆ. ಇದೇ ವೇಳೆ 832 ಹಾಸಿಗೆಗಳ ಬಾಗ್ಚಿ ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಪ್ರಧಾನಿಯವರು ಮೇಕ್ರಿ ಸರ್ಕಲ್‌ ಫ್ಲೈ ಓವರ್‌ ಮೇಲೆ ಮೋದಿ ಮೋದಿ ಎಂದು ಹರ್ಷೋದ್ಗಾರ ಮಾಡುತ್ತಿದ್ದ  ಅಭಿಮಾನಿಗಳತ್ತ ಕೈ ಬೀಸಿ ಧನ್ಯವಾದ ತಿಳಿಸಿದ್ದಾರೆ.

ಐಐಎಸ್‌ಸಿಯಿಂದ ಯಲಹಂಕ ವಾಯುನೆಲೆಗೆ ವಾಪಸಾದ ಮೋದಿ. ಇಲ್ಲಿಂದ ನೇರವಾಗಿ ಹೆಲಿಕಾಪ್ಟರ್‌ ಮೂಲಕ ಕೊಮ್ಮಘಟಕ್ಕೆ ತೆರಳಲಿದ್ದಾರೆ. ಅಲ್ಲಿಂದ ಜ್ಞಾನಭಾರತಿ ಕ್ಯಾಂಪಸ್‌ಗೆ ತೆರಳಿ ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ (ಬೇಸ್) ನೂತನ ಕ್ಯಾಂಪಸ್‌ ಅನ್ನು ಮೋದಿ ಉದ್ಘಾಟಿಸಲಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!