ಅಂಬೇಡ್ಕರ್‌ ಪುತ್ಥಳಿ, ವಿವಿಯ ನೂತನ ಕ್ಯಾಂಪಸ್‌ ಉದ್ಘಾಟಿಸಿದ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಯಲಹಂಕ ವಾಯುನೆಲೆಯಿಂದ ಹೆಲಿಕಾಪ್ಟರ್‌ ಮೂಲಕ ಕೊಮ್ಮಘಟ್ಟ ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅಲ್ಲಿಂದ ರಸ್ತೆ ಮೂಲಕ ಜ್ಞಾನಭಾರತಿ ಕ್ಯಾಂಪಸ್‌ಗೆ ಭೇಟಿ ನೀಡಿದರು. ಇಲ್ಲಿ ನಿರ್ಮಾಣಗೊಂಡಿರುವ ಸಂವಿಧಾನಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ಪುತ್ಥಳಿಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು. ಈ ವೇಳೆ ಪಾದರಕ್ಷೆ ಕಳಚಿಟ್ಟು ಪುತ್ಥಳಿ ಬಳಿ ಬಂದ ಮೋದಿ ಅಂಬೇಡ್ಕರ್‌ ಅವರ ಪುತ್ಥಳಿಗೆ ಗೌರವ ಸಲ್ಲಿಸಿದರು.

ಇದೇ ವೇಳೆ ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ (ಬೇಸ್) ನೂತನ ಕ್ಯಾಂಪಸ್‌ ಅನ್ನು ಮೋದಿ ಉದ್ಘಾಟನೆ ಮಾಡಿದರು. ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾತಾಯಣ್‌ ಮೋದಿಯವರಿಗೆ ಅಂಬೇಡ್ಕರ್‌ ಮೂರ್ತಿಯನ್ನು ಉಡುಗೊರೆಯಾಗಿ ನೀಡಿದರು. ಉನ್ನತೀಕರಿಸಿದ 150 ಐಟಿಐಗಳನ್ನು ಇದೇ ವೇಳೆ ಲೋಕಾರ್ಪಣೆಗೊಳಿಸಲಾಯಿತು. ಬಳಿಕ ವಿವಿ ವಿದ್ಯಾರ್ಥಿಗಳೊಂದಿಗೆ ಮೋದಿ ಕೆಲ ಕಾಲ ಸಂವಾದ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!