ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯ ನಾಯಕತ್ವ ಹಾಗೂ ಕೆಲಸವನ್ನು ಅನೇಕ ದೇಶದ ನಾಯಕರು ಒಪ್ಪಿಕೊಂಡು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಅತ್ಯಂತ ಬುದ್ಧಿವಂತ ಹಾಗೂ ಮಹಾನ್ ಸ್ನೇಹಿತ ಎಂದು ಹೇಳಿದ್ದಾರೆ. ಈ ವೇಳೆ ಭಾರತದ ಹೆಚ್ಚಿನ ಸುಂಕಗಳ ಕುರಿತು ತಮ್ಮ ನಿಲುವನ್ನು ಪುನರುಚ್ಚರಿಸಿದರು. ಪ್ರಧಾನಿ ಮೋದಿ ಇತ್ತೀಚೆಗೆ ಇಲ್ಲಿಗೆ ಬಂದಿದ್ದರು, ಮತ್ತು ನಾವು ಯಾವಾಗಲೂ ಉತ್ತಮ ಸ್ನೇಹಿತರಾಗಿದ್ದೇವೆ.
ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಸುಂಕ ವಿಧಿಸುವ ರಾಷ್ಟ್ರಗಳಲ್ಲಿ ಒಂದಾಗಿದೆ. ತುಂಬಾ ಬುದ್ಧಿವಂತರು ಎಂದು ಟ್ರಂಪ್ ಹೇಳಿದರು. ಅವರು ತುಂಬಾ ಬುದ್ಧಿವಂತ ವ್ಯಕ್ತಿ ಮತ್ತು ನನ್ನ ಉತ್ತಮ ಸ್ನೇಹಿತ. ಅವರು ಅಮೆರಿಕಕ್ಕೆ ಭೇಟಿ ನೀಡಿದಾಗ ನಾವು ತುಂಬಾ ಒಳ್ಳೆಯ ಮಾತುಕತೆ ನಡೆಸಿದ್ದೇವೆ. ಭಾರತ ಮತ್ತು ನಮ್ಮ ದೇಶದ ನಡುವೆ ಇದು ಚೆನ್ನಾಗಿ ಕೆಲಸ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ. ಭಾರತ ಒಬ್ಬ ಉತ್ತಮ ಪ್ರಧಾನಿಯನ್ನು ಹೊಂದಿದೆ ಎಂದು ಹೇಳಿದರು.