ಮೋದಿ ನನ್ನ ಗುರು, ಬಡೆ ಭಾಯ್‌: ಭೂತಾನ್‌ ಪ್ರಧಾನಿ ತೋಬ್ಗೆ ಮೆಚ್ಚುಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಭಾನುವಾರ (ಜೂನ್‌ 9) ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶ-ವಿದೇಶಗಳ ಸಾವಿರಾರು ಗಣ್ಯರು ಪದಗ್ರಹಣ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.

ಇದರ ಬೆನ್ನಲ್ಲೇ, ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ ಅವರು ಮೋದಿ ಅವರನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. ನರೇಂದ್ರ ಮೋದಿ ಅವರು ನನ್ನ ಗುರು, ಅವರು ನನ್ನ ದೊಡ್ಡಣ್ಣ ಇದ್ದಂತೆ ಎಂದು ಹೇಳಿದ್ದಾರೆ.

ಮೋದಿ ಅವರ ಮಾರ್ಗದರ್ಶನವು ನನಗೆ ಪ್ರಮುಖವಾಗಿದೆ. ಅವರು ನನಗೆ ಗುರು, ಸಹೋದರ ಇದ್ದಂತೆ. ಅವರ ಜತೆ ಉತ್ತಮ ಬಾಂಧವ್ಯ ಹೊಂದಿರುವುದು ನನಗೆ ಖುಷಿಯಾದ ವಿಚಾರ. ಅವರು ದೂರದೃಷ್ಟಿ ಹೊಂದಿರುವ ನಾಯಕರಾಗಿದ್ದು, ಆ ಯೋಜನೆಯನ್ನು ಅವರು ಸಾಕಾರಗೊಳಿಸುತ್ತಾರೆ. ಇದೆಲ್ಲದರ ಹೊರತಾಗಿ ಅವರು ನನಗೆ ದೊಡ್ಡಣ್ಣ ಇದ್ದಂತೆ. ನಾನು ಅವರನ್ನು ಬಡೆ ಭಾಯ್‌ ಎಂದೇ ಕರೆಯುತ್ತೇನೆ ಎಂಬುದಾಗಿ ತ್ಶೆರಿಂಗ್‌ ತೋಬ್ಗೆ ಹೇಳಿದ್ದಾರೆ.

ಮೋದಿ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಭಾರತದ ಸಾವಿರಾರು ಗಣ್ಯರ ಜತೆಗೆ ನೆರೆ ರಾಷ್ಟ್ರಗಳ ನಾಯಕರು ಕೂಡ ಭಾಗವಹಿಸಿದ್ದರು. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!