ಭಾರತದ ಅಖಂಡತೆಗೆ, ರಾಷ್ಟ್ರದ ರಕ್ಷಣೆಗೆ, ಭಾರತದ ಅಭಿವೃದ್ಧಿಗೆ ಮೋದಿ ಅವಶ್ಯಕ: ಡಾ.ಕೆ.ಸುಧಾಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ನಿನ್ನೆ ರಾತ್ರಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಅವರ ಮತ್ತು ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ನಡುವಿನ ಅಸಮಾಧಾನ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆ ಸಂದರ್ಭದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಸರಿ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ.

ಅಲ್ಲದೇ ಚಿಕ್ಕಬಳ್ಳಾಪುರ ಜಿಲ್ಲೆಯ ಜನರು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಪ್ರಧಾನಿ ನರೇಂದ್ರ ಮೋದಿಯವರ ಸ್ಥಾನವನ್ನು ಬಲಪಡಿಸಬೇಕು ಎಂದು ಈಗಾಗಲೇ ನಿರ್ಧರಿಸಿದ್ದಾರೆ ಎಂದರು.

ಭಾರತದ ಅಖಂಡತೆ, ರಾಷ್ಟ್ರ ರಕ್ಷಣೆ, ಭಾರತದ ಅಭಿವೃದ್ಧಿಗೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂಬುದನ್ನು ಜನರು ಅರಿತುಕೊಂಡಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!