ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿ ಆದ್ರೆ ಮುಸ್ಲಿಂ ಮೀಸಲಾತಿ ವಾಪಾಸ್: ಬಸನಗೌಡ ಪಾಟೀಲ್ ಯತ್ನಾಳ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ ಮುಸ್ಲಿಂ ಮೀಸಲಾತಿಯನ್ನು ತೆಗೆದುಹಾಕಲಾಗುವುದು ಎಂದು ತಿಳಿಸಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತರು ಹಾಗೂ ಹಿಂದುಳಿದವರಿಗೆ ಕಾಂಗ್ರೆಸ್ ದ್ರೋಹ ಬಗೆದಿದೆ. ಸಂವಿಧಾನದಲ್ಲಿ ಎಸ್‌ಸಿ, ಎಸ್‌ಟಿ, ಅಲ್ಪಸಂಖ್ಯಾತರು ಮತ್ತು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿ ನೀಡಲಾಗಿದೆ. ಮುಸ್ಲಿಂ ಧರ್ಮದ ಬಗ್ಗೆ ಯಾವುದೇ ಮೀಸಲಾತಿ ಇರಬಾರದು. ಮೂರನೇ ಬಾರಿಗೆ ಪ್ರಧಾನಿಯಾದ ನಂತರ, ನಾವು ಮೊದಲು ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸುತ್ತೇವೆ. ಅದನ್ನು ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗದವರಿಗೆ ನೀಡುತ್ತೇವೆ ಎಂದರು.

ಮೊದಲ ಹಂತದಲ್ಲಿ ಮತದಾನ ನಡೆದ 14 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವಿನ ವಾತಾವರಣ ನಿರ್ಮಾಣವಾಗಿದೆ. ಮೇ 7 ರಂದು ನಡೆಯಲಿರುವ ಉಳಿದ 14 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ವಿಶ್ವಾಸದಲ್ಲಿದ್ದು, ಎರಡನೇ ಹಂತದಲ್ಲಿ ಬಿಜೆಪಿ ಹಾಗೂ ಮೋದಿ ಅಲೆಯೂ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಉಳಿದ 14 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!