ಮೋದಿ ವಿಶ್ವದಲ್ಲೇ ಅತ್ಯಂತ ಜನಪ್ರಿಯ-ಪ್ರಮುಖ ನಾಯಕ: ಇಟಲಿ ಪ್ರಧಾನಿ ಶ್ಲಾಘನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ವಿಶ್ವದಲ್ಲೇ ಅತ್ಯಂತ ಜನಪ್ರಿಯ ಹಾಗೂ ಪ್ರಮುಖ ನಾಯಕ ಎಂದು ಬಣ್ಣಿಸಿದ್ದಾರೆ.

ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಮೋದಿ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೋದಿ ಅವರು ವಿಶ್ವದ ಪ್ರಮುಖ ನಾಯಕರಾಗಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರು ಜಾಗತಿಕ ಮಟ್ಟದ ಎಲ್ಲ ನಾಯಕರ ಪೈಕಿ ಅತ್ಯಂತ ಪ್ರೀತಿಪಾತ್ರರಾಗಿದ್ದಾರೆ. ಅವರು ಜಾಗತಿಕ ಮಟ್ಟದ ಪ್ರಮುಖ ನಾಯಕ ಎಂಬುದು ಸಾಬೀತಾಗಿದೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

ರಷ್ಯಾ – ಉಕ್ರೇನ್ ಯುದ್ಧವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂಬುದನ್ನು ಭಾರತ ಆರಂಭದಿಂದಲೂ ಪ್ರತಿಪಾದಿಸುತ್ತಲೇ ಬಂದಿದೆ. ಉಕ್ರೇನ್ ಶಾಂತಿ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಲು ಭಾರತ ಪೂರ್ಣ ಸಿದ್ಧವಿದೆ. ಇಂಡೋ-ಪೆಸಿಫಿಕ್ ಮಹಾಸಾಗರ ಪ್ರದೇಶದಲ್ಲಿ ಕೈಗೊಳ್ಳಲಾಗುವ ಉಪಕ್ರಮಕ್ಕೆ ಸೇರಲು ಇಟಲಿ ನಿರ್ಧರಿಸಿರುವುದು ಸಂತಸದ ವಿಚಾರ ಎಂದೂ ಅವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!