ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಟಲಿಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದಾರೆ. ಇಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಜತೆ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿವೆ. ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ಮೋದಿಯವರ ಮೊದಲ ವಿದೇಶ ಪ್ರವಾಸ ಇದಾಗಿದೆ.
ಬೋರ್ಗೊ ಎಗ್ನಾಜಿಯಾದ ಐಷಾರಾಮಿ ರೆಸಾರ್ಟ್‌ನಲ್ಲಿ ಜಿ7 ಶೃಂಗಸಭೆ ನಡೆಯುತ್ತಿದ್ದು, ವಿಶ್ವದ ಗಣ್ಯ ನಾಯಕರಿಗೆ ಆಹ್ವಾನ ನೀಡಲಾಗಿದೆ. ಜನರ ಜೀವನ ಸುಧಾರಿಸುವ ಹಾಗೂ ಕೃತಕ ಬುದ್ಧಿಮತ್ತೆ, ಶಕ್ತಿ, ಆಫ್ರಿಕಾ-ಮೆಡಿಟರೇನಿಯನ್ ವಿಷಯ ಸೇರಿದಂತೆ ಹಲವು ವಿಚಾರಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ, ಪೋಪ್ ಫ್ರಾನ್ಸಿಸ್ ಅವರು ಸಹ ಇರಲಿದ್ದಾರೆ.