ಸೋಲಾಪುರದಲ್ಲಿ ‘AMRUT 2.0’ ಯೋಜನೆಗೆ ಮೋದಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಇಂದು ಮಹಾರಾಷ್ಟ್ರಕ್ಕೆ ಆಗಮಿಸಿದ್ದಾರೆ. ಮಹಾರಾಷ್ಟ್ರದ ಸೋಲಾಪುರದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಮಹಾರಾಷ್ಟ್ರ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಸುಮಾರು 2 ಲಕ್ಷ ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಮಂಜೂರು ಮಾಡಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅಲ್ಲಿಂದ ಸೋಲಾಪುರ ತಲುಪಿದರು. ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ಫಡ್ನವೀಸ್ ಮತ್ತು ರಾಜ್ಯಪಾಲ ರಮೇಶ್ ಬೈನ್ಸ್‌ ಕೂಡ ಸೋಲಾಪುರದಲ್ಲಿ ಉಪಸ್ಥಿತರಿದ್ದರು. ಪೇಟ ತೊಡಿಸಿ ಪ್ರಧಾನಿಯನ್ನು ಸಿಎಂ ಸ್ವಾಗತಿಸಿದರು.

ಅಮೃತ್ 2.0 ಯೋಜನೆಗೆ ಚಾಲನೆ ನೀಡಿದರು. ಇದರ ಅಡಿಯಲ್ಲಿ, ನಗರಗಳು ಮತ್ತು ಪಟ್ಟಣಗಳಲ್ಲಿನ ಪ್ರತಿ ಮನೆಗೆ ನೀರನ್ನು ತಲುಪಿಸಲಾಗುತ್ತಿದೆ. ಅಲ್ಲದೆ, ಎಲ್ಲಾ ಒಳಚರಂಡಿಯನ್ನು ಮುಚ್ಚಲಾಗುತ್ತಿದೆ.

ಮಹಾರಾಷ್ಟ್ರ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಿರುವ 90 ಸಾವಿರ ಮನೆಗಳನ್ನು ಸಮಾಜಕ್ಕೆ ಸಮರ್ಪಿಸಲಿದ್ದಾರೆ. ಸೋಲಾಪುರದ ರಾಜನಗರ ಹೌಸಿಂಗ್ ಸೊಸೈಟಿಯ 15,000 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು. ಈ ಮನೆಗಳ ಪ್ರಯೋಜನವೆಂದರೆ ನೇಕಾರರು, ವ್ಯಾಪಾರಿಗಳು, ಮಗ್ಗ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಚಾಲಕರು. ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ 10,000 ಕೋಟಿ ರೂ.ಗಳ ಮೊದಲ ಮತ್ತು ಎರಡನೇ ಕಂತಿನ ಬಿಡುಗಡೆ ಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!