ಜಿ20 ಶೃಂಗಸಭೆಯಲ್ಲಿ ಮೊದಲ ಬಾರಿಗೆ ಬ್ರಿಟನ್‌ ಪ್ರಧಾನಿ ರಿಷಿ ಸುನಾಕ್ ಭೇಟಿಯಾದ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡೋನೇಷಿಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ 20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ಅವರು ಮಂಗಳವಾರ ಮೊದಲ ಬಾರಿಗೆ ಬ್ರಿಟನ್‌ ಪ್ರಧಾನಿ, ಭಾರತ ಮೂಲದ ರಿಷಿ ಸುನಾಕ್ ಅವರನ್ನು ಭೇಟಿಯಾದರು.

G20 ಶೃಂಗಸಭೆಯ ಮೊದಲ ದಿನದ ಸಂವಾದದಲ್ಲಿ ಭಾರತ ಮತ್ತು ಬ್ರಿಟನ್‌ ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ, ರಿಷಿ ಸುನಾಕ್‌ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ ಬಗ್ಗೆ ಪ್ರಧಾನ ಮೋದಿ ಅವರ ಕಚೇರಿ ಟ್ವೀಟ್‌ ಮಾಡಿ ತಿಳಿಸಿದೆ.

ಉಭಯ ನಾಯಕರ ನಡುವೆ ಇದು ಮೊದಲ ಮುಖಾಮುಖಿ ಮಾತುಕತೆಯಾಗಿದ್ದು, ಈ ಮೊದಲು ಪಿಎಂ ಮೋದಿ ಮತ್ತು ಸುನಾಕ್ ಅವರು ಫೋನ್‌ನಲ್ಲಿ ಮಾತನಾಡಿದ್ದರು.

ಇದೇ ವೇಳೆ ಪ್ರಧಾನಿ ಮೋದಿ ಸೆನೆಗಲ್ ಗಣರಾಜ್ಯದ ಅಧ್ಯಕ್ಷ ಮ್ಯಾಕಿ ಸಾಲ್, ನೆದರ್‌ಲ್ಯಾಂಡ್‌ನ ಪ್ರಧಾನಿ ಮಾರ್ಕ್ ರುಟ್ಟೆ ಮತ್ತು ಯುಎಸ್ ಅಧ್ಯಕ್ಷ ಜೋ ಬಿಡನ್ ಅವರನ್ನು ಭೇಟಿಯಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!