ಗಾಯಕಿ ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಗಾಯಕಿ ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರಕ್ಕೆಪ್ರಧಾನಿ ಮೋದಿ ಹೂಗುಚ್ಛ ಅರ್ಪಿಸಿ, ಅಂತಿಮ ನಮನ ಸಲ್ಲಿಸಿದರು.
ಲತಾ ಮಂಗೇಶ್ಕರ್ ಅಂತ್ಯಕ್ರಿಯೆ ಮುಂಬೈನ ಶಿವಾಜಿ ಪಾರ್ಕ್​ನಲ್ಲಿ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡರು.
ಇದೇ ವೇಳೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ರಾಜ್ಯ ಸಚಿವ ಆದಿತ್ಯ ಠಾಕ್ರೆ ಕೂಡ ಅಂತಿಮ ನಮನ ಸಲ್ಲಿಸಿದರು ಸಚಿನ್​ ತೆಂಡೂಲ್ಕರ್​ ಮತ್ತು ಅವರ ಪತ್ನಿ ಅಂಜಲಿ ತೆಂಡೂಲ್ಕರ್​ ಸಹ ಅಂತಿಮ ನಮನ ಸಲ್ಲಿಸಿದ್ದಾರೆ.
ಇನ್ನು ಕೆಲವೇ ಸಮಯದಲ್ಲಿ ಲತಾ ಮಂಗೇಶ್ಕರ್ ಅವರ ಅಂತ್ಯಸಂಸ್ಕಾರಕ್ಕೆ ಸಕಲ ಗೌರವಗಳೊಂದಿಗೆ ನೆರವೇರಿಸಲಾಗುವುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!