May 10, 2026
Sunday, May 10, 2026
spot_img

‘ದೇವರ ಸ್ವಂತ ನಾಡಿ’ನಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ ಮೋದಿ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ನಮೋ!

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ದೇವರ ಸ್ವಂತ ನಾಡು’ ಕೇರಳದಲ್ಲಿ ಚುನಾವಣಾ ಪ್ರಚಾರದ ರಣಕಹಳೆ ಮೊಳಗಿಸಿದ ಪ್ರಧಾನಿ ಮೋದಿ, ಎಲ್‌ಡಿಎಫ್-ಯುಡಿಎಫ್ ವಿರುದ್ಧ ವಾಗ್ದಾಳಿ ನಡೆಸಿದರು.

ಪಾಲಕ್ಕಾಡ್‌ನ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮೋದಿ, ಗಲ್ಫ್ ರಾಷ್ಟ್ರಗಳಲ್ಲಿರುವ ಭಾರತೀಯರ ಜೀವದ ಜೊತೆ ಕಾಂಗ್ರೆಸ್ ಚೆಲ್ಲಾಟವಾಡುತ್ತಿದೆ ಎಂದು ಟೀಕಿಸಿದರು.

ಇತ್ತೀಚೆಗೆ ಮಧ್ಯಪ್ರಾಚ್ಯದ ಕದನದ ಕುರಿತು ಕಾಂಗ್ರೆಸ್ ನೀಡಿದ ಹೇಳಿಕೆಯನ್ನು ಟೀಕಿಸುತ್ತಾ ಮೋದಿ, ಗಲ್ಫ್ ಪ್ರದೇಶದಲ್ಲಿ ಒಂದು ಕೋಟಿಗೂ ಅಧಿಕ ಭಾರತೀಯರು ವಾಸಿಸುತ್ತಿದ್ದಾರೆ. ಕೇಂದ್ರ ಸರಕಾರ ಅವರ ಸುರಕ್ಷಿತ ರಕ್ಷಣೆಗೆ ಮೊದಲ ಆದ್ಯತೆ ನೀಡುತ್ತಿದೆ. ಆದರೆ ಕಾಂಗ್ರೆಸ್ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ವಿದೇಶದಲ್ಲಿರುವ ಭಾರತೀಯರ ಸುರಕ್ಷತೆಗೆ ಅಡ್ಡಗಾಲು ಇಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಯುದ್ಧ ಶುರುವಾದ ದಿನದಿಂದ ನಾವು ಗಲ್ಫ್ ರಾಷ್ಟ್ರಗಳ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ನಮ್ಮ ಪ್ರಜೆಗಳ ಸುರಕ್ಷತೆಗಾಗಿ ಅಲ್ಲಿನ ರಾಯಭಾರಿಗಳು ಹಗಲಿರುಳು ಶ್ರಮಿಸುತ್ತಿವೆ ಎಂದು ತಿಳಿಸಿದರು.

ನಮ್ಮ ಜನರ ಹಿತಾಸಕ್ತಿಗಳ ರಕ್ಷಣೆಗೆ ಸದಾ ಎನ್‌ಡಿಎ ಸರ್ಕಾರ ಬದ್ದವಾಗಿದ್ದು, ಪ್ರಮುಖ ಆದ್ಯತೆಯಾಗಿದ್ದು, ವಿದೇಶಗಳಲ್ಲಿ ಇರುವ ಭಾರತೀಯರು ಯಾವುದೇ ಕಷ್ಟಗಳನ್ನು ಎದುರಿಸದಂತೆ ನೋಡಿಕೊಳ್ಳಲು ಸನ್ನದ್ಧವಾಗಿವೆ ಎಂದು ಹೇಳಿದರು.

ಈ ವೇಳೆ ಎಲ್‌ಡಿಎಫ್ ಮತ್ತು ಯುಡಿಎಫ್ ಮೈತ್ರಿಕೂಟಗಳ ವಿರುದ್ಧವಾಗ್ದಾಳಿ ನಡೆಸಿದ ಮೋದಿ, ಕೇರಳದಲ್ಲಿಈ ಎರಡೂ ಪಕ್ಷಗಳು ದಶಕಗಳಿಂದ ಅಧಿಕಾರಕ್ಕೆ ಬಂದಿವೆ.ಜೊತೆ ಸೇರಿಕೊಂಡ ಹಗರಣಗಳು ನಡೆಸುತ್ತಿದ್ದು, ಸಾರ್ವಜನಿಕರಿಗೆ ಮೋಸ ಮಾಡುತ್ತಿವೆ ಎಂದು ಗುಡುಗಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !