ವಿಶ್ವಕಪ್ ಫೈನಲ್‌ ಮುನ್ನ ರಂಗೇರಲಿದೆ ಮೋದಿ ಕ್ರೀಡಾಂಗಣ: ಲಿಸ್ಟ್ ಕೊಟ್ರು ನೋಡಿ BCCI!

ಹೊಸದಿಗಂತ ಡಿಜಿಟಲ್ ಡೆಸ್ಕ್

ವಿಶ್ವವೇ ಕಾತುರದಿಂದ ಕಾಯುತ್ತಿರುವ ವಿಶ್ವಕಪ್ ಫೈನಲ್‌ ಪಂದ್ಯಕ್ಕೆ ಕ್ಷಣಗಣನೆ ಬಾಕಿ ಉಳಿದಿದ್ದು, ಬಿಸಿಸಿಐ (BCCI) ಸಮಾರೋಪ ಸಮಾರಂಭವನ್ನು ಅದ್ಧೂರಿಯಾಗಿ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ.

ಆಸ್ಟ್ರೇಲಿಯಾ ಮತ್ತು ಭಾರತ (Ind vs Aus) ನಡುವಣ ಫೈನಲ್‌ ಪಂದ್ಯದ ವೇಳೆ ಹಲವು ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತ ಮಾಹಿತಿಯನ್ನು ಬಿಸಿಸಿಐ ತನ್ನ ಅಧಿಕೃತ X ಖಾತೆಯಲ್ಲಿ ಹಂಚಿಕೊಂಡಿದೆ.

https://twitter.com/BCCI/status/1725733249409044765?ref_src=twsrc%5Etfw%7Ctwcamp%5Etweetembed%7Ctwterm%5E1725733249409044765%7Ctwgr%5E21374eaf2349d56a948f8dde2a261a9a5e90da85%7Ctwcon%5Es1_&ref_url=https%3A%2F%2Fpublictv.in%2Fthe-icc-mens-cricket-world-cup-2023-final-programme-schedule-at-narendra-modi-stadium%2F

ಏರ್ ಶೋ:
ಪಂದ್ಯದ ಟಾಸ್​ ಆದ 5 ನಿಮಿಷದಲ್ಲಿ ಅಂದರೆ 1.35ರಿಂದ 1.50ರ ವರೆಗೆ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಲಿದೆ. ನರೇಂದ್ರ ಮೋದಿ ಸ್ಟೇಡಿಯಂನ (Narendra Modi Stadium) ಬಾನಂಗಳದಲ್ಲಿ ಲೋಹದ ಹಕ್ಕಿಗಳು ತಮ್ಮ ಚಮತ್ಕಾರ ತೋರಿಸಲಿವೆ.

ಡ್ರಿಂಕ್ಸ್ ಬ್ರೇಕ್ ವೇಳೆ ಸಂಗೀತ ರಸಮಂಜರಿ:
ಪಂದ್ಯದ ಮೊದಲ ಇನ್ನಿಂಗ್ಸ್​ನ ಡ್ರಿಂಕ್ಸ್ ಬ್ರೇಕ್ ವೇಳೆ ಆದಿತ್ಯ ಗಧ್ವಿ ಅವರಿಂದ ಗಾಯನ ಪ್ರದರ್ಶನ ನಡೆಯಲಿದೆ. ಮೊದಲ ಇನ್ನಿಂಗ್ಸ್‌ ಮುಗಿದ ಬಳಿಕ ಸಿಗುವ ಸುಮಾರು 30 ನಿಮಿಷಗಳ ಸಮಯದಲ್ಲಿ ಪ್ರೀತಮ್ ಚಕ್ರವರ್ತಿ, ಜೋನಿತಾ ಗಾಂಧಿ, ನಕಾಶ್ ಅಜೀಜ್, ಅಮಿತ್ ಮಿಶ್ರಾ, ಅಕಾಸ ಸಿಂಗ್ ಮತ್ತು ತುಷಾರ್ ಜೋಶಿ ಇವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಇರಲಿದೆ.

2ನೇ ಇನ್ನಿಂಗ್ಸ್‌ ಡ್ರಿಂಕ್ಸ್ ಬ್ರೇಕ್ ವೇಳೆ ಲೇಸರ್ ಶೋ:
ಫೈನಲ್​ ಪಂದ್ಯದ 2ನೇ ಇನ್ನಿಂಗ್ಸ್‌ನ ಡ್ರಿಂಗ್ಸ್‌ ಬ್ರೇಕ್‌ ವೇಳೆ ವಿಶಿಷ್ಠ ಶೈಲಿಯ ಲೇಸರ್ ಮತ್ತು ಲೈಟ್ ಶೋ ನಡೆಯಲಿದೆ ಎಂದು ಬಿಸಿಸಿಐ ತಿಳಿಸಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!