ಮೋದಿ ಉಪನಾಮ ಹೇಳಿಕೆ: ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ನಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೋದಿ ಸರ್​​ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ (Gujarat High court) ಮಂಗಳವಾರ ನಿರಾಕರಿಸಿದೆ .

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿದ ಮನವಿಯನ್ನು ಗುಜರಾತ್ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು.

ಬೇಸಿಗೆ ರಜೆ ಮುಗಿದ ನಂತರ ಗುಜರಾತ್ ಹೈಕೋರ್ಟ್ ಇದರ ಬಗ್ಗೆ ತೀರ್ಪು ನೀಡಲಿದೆ. 2019 ರ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿದ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ದೋಷಾರೋಪಣೆಯ ನಂತರ, ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು.

ಸೂರತ್ ನ್ಯಾಯಾಲಯದ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಗುಜರಾತ್ ಹೈಕೋರ್ಟ್ ಮಂಗಳವಾರ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆಯನ್ನು ನಿರಾಕರಿಸಿದೆ. ರಜೆಯ ನಂತರ ಜೂನ್‌ನಲ್ಲಿ ತೀರ್ಪು ನೀಡುವುದಾಗಿ ನ್ಯಾಯಾಲಯ ಹೇಳಿದೆ. ಮೇ 5 ಹೈಕೋರ್ಟ್ ನ ಕೊನೆಯ ಕಾರ್ಯಾಚರಣೆ ದಿನವಾಗಿದ್ದು, ಜೂನ್ 5ರಂದು ಇದು ಮತ್ತೆ ತೆರೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!