ಮೋದಿ ಉಪನಾಮ ಹೇಳಿಕೆ: ರಾಹುಲ್ ಗಾಂಧಿಗೆ ಹೈಕೋರ್ಟ್ ನಿಂದ ರಿಲೀಫ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ(Rahul Gandhi) ಗೆ ಪಾಟ್ನಾ ಹೈಕೋರ್ಟ್​ ರಿಲೀಫ್ ನೀಡಿದೆ.

ಬಿಜೆಪಿಯ ರಾಜ್ಯಸಭಾ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಇದೀಗ ರಿಲೀಫ್ ಸಿಕ್ಕಿದೆ.

ಆದ್ರೆ ಗುಜರಾತ್​ನ ಸೂರತ್ ಕೋರ್ಟ್​ನಲ್ಲಿರುವ ಪ್ರಕರಣಕ್ಕೂ ಇದಕ್ಕೂ ಸಂಬಂಧವಿಲ್ಲ. ಇನ್ನೊಂದು ಪ್ರಕರಣದಲ್ಲಿ ವಯನಾಡ್‌ ನ ಲೋಕಸಭಾ ಸಂಸದರಾದ ರಾಹುಲ್ ಗಾಂಧಿ ಅವರನ್ನು ಸೂರತ್‌ ನ ಕೆಳ ನ್ಯಾಯಾಲಯವು ಮಾರ್ಚ್ 23 ರಂದು ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅನರ್ಹಗೊಳಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!