ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಿಗೆ ನಾಡೇ ಇಂದು ಮಕರ ಸಂಕ್ರಾಂತಿ ಹಬ್ಬಾಚರಣೆಯಲ್ಲಿ ಮುಳುಗಿದ್ದು, ಕರ್ನಾಟಕದಲ್ಲಿನ ಹಬ್ಬದ ಸಂಭ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡಾ ಸಾಥ್ ನೀಡಿದ್ದಾರೆ!
ಖುದ್ದು ಕನ್ನಡದಲ್ಲಿಯೇ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿರುವ ಮೋದಿ. ದೇಶದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಅಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ ಎಂದು ಬರೆದುಕೊಂಡಿದ್ದಾರೆ.