ಹೊಸದಿಗಂತ ಡಿಜಿಟಲ್ ಡೆಸ್ಕ್:
ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಭಾನುವಾರ ಬೆಳಗ್ಗೆ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ. ಬಿಜೆಪಿ ನಾಯಕ ಮೋದಿ ಅವರು ಇಂದು ಸಂಜೆ 7:15 ಕ್ಕೆ ಐತಿಹಾಸಿಕ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅಧ್ಯಕ್ಷ ಮುಯಿಜ್ಜು ಅವರನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಕಾರ್ಯದರ್ಶಿ (ಪಶ್ಚಿಮ), ಪವನ್ ಕಪೂರ್ ಅವರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
“ಮಾಲ್ಡೀವ್ಸ್‌ನ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಅವರು ಪ್ರಧಾನ ಮಂತ್ರಿ ಮತ್ತು ಮಂತ್ರಿಗಳ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ಆಗಮಿಸಿದ್ದಾರೆ. ಸಿಸಿ (ಪಶ್ಚಿಮ) ಪವನ್ ಕಪೂರ್ ಅವರು ವಿಮಾನ ನಿಲ್ದಾಣದಲ್ಲಿ ಮಾಲ್ಡೀವ್ಸ್‌ನ ಅಧ್ಯಕ್ಷರನ್ನು ಆತ್ಮೀಯ ಸ್ವಾಗತ ಮಾಡಿದರು” ಎಂದು ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.