ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೋದಿ ಸತತ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೇಶ, ವಿದೇಶದ ಗಣ್ಯರು ರಾಷ್ಟ್ರ ರಾಜಧಾನಿಗೆ ಆಗಮಿಸುತ್ತಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಭಾಗವಹಿಸುತ್ತಿದ್ದಾರೆ.
ನಾನು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದೇನೆ. ಇದು ಅತ್ಯಂತ ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಸತತ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಪ್ರಧಾನಿ ಮೋದಿಯವರನ್ನು ನಾನು ಅಭಿನಂದಿಸುತ್ತೇನೆ ಎಂದು ದೆಹಲಿಗೆ ತೆರಳುವ ವೇಳೆ ರಜನಿಕಾಂತ್ ಹೇಳಿದ್ದಾರೆ .
ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆ ಆಗುವುದಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಇಂದು (ಭಾನುವಾರ) ಸಂಜೆ 7:15ಕ್ಕೆ ಸರಿಯಾಗಿ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ.