August 13, 2026
Thursday, August 13, 2026
spot_img

ಮೋದಿ-ಟಕೈಚಿ ಭೇಟಿ: ರಕ್ಷಣೆಯಿಂದ ತಂತ್ರಜ್ಞಾನದವರೆಗೆ ಮಹತ್ವದ ಚರ್ಚೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಜಪಾನ್ ನಡುವಿನ ಕಾರ್ಯತಂತ್ರದ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಜಪಾನ್ ಪ್ರಧಾನಿ ಸನಾ ಇ ಟಕೈಚಿ ಜುಲೈ 1ರಿಂದ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.

ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರ ಮೊದಲ ಅಧಿಕೃತ ಭಾರತ ಭೇಟಿ ಇದಾಗಿದ್ದು, ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಲವು ಮಹತ್ವದ ವಿಷಯಗಳ ಕುರಿತು ಉನ್ನತ ಮಟ್ಟದ ಮಾತುಕತೆ ನಡೆಯಲಿದೆ.

ರಕ್ಷಣೆ ಮತ್ತು ಇಂಡೋ-ಪೆಸಿಫಿಕ್‌ಗೆ ಆದ್ಯತೆ

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿನ ಭದ್ರತಾ ಪರಿಸ್ಥಿತಿ, ಉಭಯ ದೇಶಗಳ ರಕ್ಷಣಾ ಸಹಕಾರ ಹಾಗೂ ಕ್ವಾಡ್ ರಾಷ್ಟ್ರಗಳ ಸಮನ್ವಯವನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ನಾಯಕರು ಚರ್ಚಿಸಲಿದ್ದಾರೆ. ಜಂಟಿ ಮಿಲಿಟರಿ ತರಬೇತಿ ಮತ್ತು ಪ್ರಾದೇಶಿಕ ಭದ್ರತೆ ಕುರಿತ ವಿಷಯಗಳೂ ಸಭೆಯ ಪ್ರಮುಖ ಕಾರ್ಯಸೂಚಿಯಲ್ಲಿವೆ.

ಇದನ್ನೂ ಓದಿ:

ಹೂಡಿಕೆ, ತಂತ್ರಜ್ಞಾನಕ್ಕೆ ಒತ್ತು

ಮುಂಬೈ–ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಪ್ರಗತಿ, ಸೆಮಿಕಂಡಕ್ಟರ್, ಕೃತಕ ಬುದ್ಧಿಮತ್ತೆ (AI), 6G ತಂತ್ರಜ್ಞಾನ ಹಾಗೂ ಜಾಗತಿಕ ಪೂರೈಕೆ ಸರಪಳಿಯನ್ನು ಬಲಪಡಿಸುವ ಕುರಿತು ಎರಡೂ ರಾಷ್ಟ್ರಗಳು ಚರ್ಚಿಸಲಿವೆ. ಭಾರತದಲ್ಲಿ ಜಪಾನ್ ಹೂಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ಪ್ರಯತ್ನಕ್ಕೂ ಈ ಭೇಟಿ ವೇದಿಕೆಯಾಗಲಿದೆ.

ಹಸಿರು ಇಂಧನ ಮತ್ತು ಅಭಿವೃದ್ಧಿ ಯೋಜನೆಗಳು

ಕ್ಲೀನ್ ಎನರ್ಜಿ ಸಹಭಾಗಿತ್ವದಡಿ ಹಸಿರು ಹೈಡ್ರೋಜನ್, ನವೀಕರಿಸಬಹುದಾದ ಇಂಧನ ಮತ್ತು ಎಲೆಕ್ಟ್ರಿಕ್ ವಾಹನ ತಂತ್ರಜ್ಞಾನದಲ್ಲಿ ಸಹಕಾರ ವಿಸ್ತರಿಸುವ ಸಾಧ್ಯತೆಯಿದೆ. ಇದೇ ವೇಳೆ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಮೂಲಸೌಕರ್ಯ, ಕೈಗಾರಿಕಾ ಕಾರಿಡಾರ್, ವ್ಯಾಪಾರ, ನಾವೀನ್ಯತೆ ಹಾಗೂ ಆರ್ಥಿಕ ಸಹಕಾರದ ಹಲವು ಹೊಸ ಯೋಜನೆಗಳ ಕುರಿತು ಮಹತ್ವದ ನಿರ್ಧಾರಗಳು ಹೊರಬರುವ ನಿರೀಕ್ಷೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !