ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಇಂದುಪ್ಯಾಲೆಸ್ತಿನ್ ಅಧ್ಯಕ್ಷ ಮಹಮೌದ್ ಅಬ್ಬಾಸ್ ಜೊತೆ ದೂರವಾಣಿ ಕರೆ ಮೂಲಕ ಮಾತನಾಡಿದ್ದಾರೆ. ಈ ವೇಳೆ ಗಾಜಾದಲ್ಲಿ ಸಂತ್ರಸ್ಥರಾಗಿರುವ ಪ್ಯಾಲೆಸ್ತಿನ್ ಜನತೆಗೆ ಮಾನವೀಯ ನೆರವು ನೀಡುವುದಾಗಿ ಘೋಷಿಸಿದ್ದಾರೆ.
ಗಾಜಾ ಆಸ್ಪತ್ಪೆ ಮೇಲೆ ನಡೆದ ದಾಳಿಯನ್ನು ಮೋದಿ ತೀವ್ರವಾಗಿ ಖಂಡಿಸಿದ್ದು, ಗಾಜಾದಲ್ಲಿನ ಪ್ಯಾಲೆಸ್ತಿನ್ ಜನತೆಗೆ ಮಾನವೀಯ ನೆರವನ್ನು ಭಾರತ ನೀಡಲಿದೆ. ಗಾಜಾ ಜನತೆಗೆ ಪರಿಹಾರ ಸಾಮಾಗ್ರಿಗಳನ್ನು ಭಾರತ ಕಳುಹಿಸಿಕೊಡಲಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.
ಇದೇ ವೇಳೆ ಭಯೋತ್ಪಾದನೆಯನ್ನು ಖಂಡಿಸಿದ ಪ್ರಧಾನಿ ಮೋದಿ ಭಾರತ ಹಾಗೂ ಪ್ಯಾಲೆಸ್ತಿನ್ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿದ್ದಾರೆ.
ಪ್ಯಾಲೆಸ್ತಿನ ನಾಗರೀಕ ಸುರಕ್ಷತೆ ಕುರಿತು ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಮೋದಿ ನೆರವಿಗೆ ಪ್ಯಾಲೆಸ್ತಿನ್ ಅಧ್ಯಕ್ಷ ಮೊಹಮೊದ್ ಅಬ್ಬಾಸ್ ಧನ್ಯವಾದ ಹೇಳಿದ್ದಾರೆ. ಇದೇ ವೇಳೆ ಶಾಂತಿ ಸ್ಥಾಪನೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ.
ಹಮಾಸ್ ಇಸ್ರೇಲ್ ಮೇಲೆ ನಡೆಸಿದ ನರಮೇಧವನ್ನು ಖಂಡಿಸಿದ್ದು ಮಾತ್ರವಲ್ಲ, ಗಾಜಾ ಆಸ್ಪತ್ರೆ ಮೇಲೆ ನಡೆದ ದಾಳಿಯನ್ನು ಮೋದಿ ಖಂಡಿಸಿದ್ದರು. ಅಮಾಯಕ ನಾಗರೀಕರ ಮೇಲಿನ ದಾಳಿಗೆ ಆತಂಕ ವ್ಯಕ್ತಪಡಿಸಿದ್ದರು.