Monday, March 4, 2024

ನಾಳೆ ಬೆಂಗಳೂರಿಗೆ ಮೋದಿ; ಸಂಚಾರದಲ್ಲಿ ಭಾರಿ ವ್ಯತ್ಯಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ದೇವನಹಳ್ಳಿ ಏರೋಸ್ಪೇಸ್ ಪಾರ್ಕ್‌ನಲ್ಲಿ ಬೋಯಿಂಗ್ ಇಂಡಿಯಾ ಅಡ್ವಾನ್ಸ್ಡ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕ್ಯಾಂಪಸ್ ಅನ್ನು ಜನವರಿ 19 ರಂದು ಉದ್ಘಾಟಿಸಲಿದ್ದಾರೆ. ಶುಕ್ರವಾರ ಬೆಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ಸಂಚಾರ ನಿಯಮಗಳನ್ನು ಬೆಳಿಗ್ಗೆ 8 ಗಂಟೆಯಿಂದ . ಸಂಜೆ 6 ಗಂಟೆ ವರೆಗೆ ಬದಲಾಯಿಸಲಾಗಿದೆ.

ಪ್ರಧಾನಿ ಮೋದಿ ಶುಕ್ರವಾರ ಮಧ್ಯಾಹ್ನ 2:10 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ಬಿಐಇಟಿಸಿ ಕ್ಯಾಂಪಸ್ ತಲುಪಿ ಮಧ್ಯಾಹ್ನ 3.45ರವರೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು. ಬಳಿಕ ವಿಮಾನ ನಿಲ್ದಾಣದ ಮೂಲಕ ದಿಲ್ಲಿಗೆ ಪ್ರಯಾಣಿಸಲಿದ್ದಾರೆ. ಹೀಗಾಗಿ ನಾಳೆ ಹೆಣ್ಣೂರು-ಬಾಗಲೂರು ರಸ್ತೆ ಹಾಗೂ ಇತರ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ವಾಹನ ಸಂಚಾರ ನಿಷೇಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!