ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಪ್ರಧಾನಿ ಮೋದಿ ಕೊಲ್ಕತ್ತಾದಲ್ಲಿನ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.
ಪಂಜಾಬ್ ನಲ್ಲಿ ನಡೆದ ಬಹುದೊಡ್ಡ ಭದ್ರತಾ ಲೋಪದ ಬಳಿಕ ಪ್ರಧಾನಿ ಮೋದಿ ಭಾಗವಹಿಸುತ್ತಿರುವ ಮೊದಲ ಕಾರ್ಯಕ್ರಮ ಇದಾಗಿದೆ. ಇದು ವರ್ಚುವಲ್ ಮೂಲಕ ನಡೆಯಲಿದೆ.
ಈ ಬಗ್ಗೆ ಮಾಹಿತಿ ನೀಡಿದ ಪ್ರಧಾನಿ ಮೋದಿ, ಜ.7ರಂದು ಮಧ್ಯಾಹ್ನ 1 ಗಂಟೆಗೆ ಸಿಎನ್ ಸಿಐ ನ ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದೇನೆ. ಈ ಸಂಸ್ಥೆ ತನ್ನ ಆರೋಗ್ಯ ರಕ್ಷಣಾ ಸಾಮರ್ಥ್ಯವನ್ನು ಪೂರ್ವ ಹಾಗೂ ಈಶಾನ್ಯ ಭಾರತಕ್ಕೆ ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ.
ಸಿಎನ್ ಸಿಐ ನ ಎರಡನೇ ಕ್ಯಾಂಪಸ್ ನಿರ್ಮಾಣಕ್ಕೆ 530 ಕೋಟಿ ರೂ. ವೆಚ್ಚವಾಗಿದ್ದು, ಅದರಲ್ಲಿ ಸುಮಾರು 400 ಕೋಟಿ ರೂ. ಕೇಂದ್ರ ಸರ್ಕಾರ ಒದಗಿಸಿದೆ. ಉಳಿದ ಮೊತ್ತದಲ್ಲಿ ಬಂಗಾಳ ಸರ್ಕಾರ 75:25 ಅನುಪಾದಲ್ಲಿ ನೆರವು ನೀಡಿದೆ.
ಈ ಆಸ್ಪತ್ರೆಯು ಸುಸಜ್ಜಿತವಾಗಿದ್ದು, ಕ್ಯಾನ್ಸರ್ ರೋಗಿಗಳಿಗೆಂದು 400 ಹಾಸಿಗೆಗಳನ್ನು ಇರಿಸಲಾಗಿದೆ. ಇಲ್ಲಿ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ಆಧುನಿಕ ಸೌಲಭ್ಯಗಳು ಲಭ್ಯವಿರಲಿದೆ.