ನಾಳೆ ವಿಶಾಖಪಟ್ಟಣದಲ್ಲಿ ಆಯೋಜಿಸಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮೋದಿ ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಾಳೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ವಿಶ್ವ ದಾಖಲೆಯನ್ನು ಸ್ಥಾಪಿಸುವ ಸಲುವಾಗಿ ಆಂಧ್ರ ಪ್ರದೇಶ ಸರ್ಕಾರವು ದೇಶದಲ್ಲಿ ನಡೆಯುವ ಅತಿದೊಡ್ಡ ಯೋಗ ಕಾರ್ಯಕ್ರಮಗಳಲ್ಲಿ ಒಂದನ್ನು ಪ್ಲಾನ್ ಮಾಡಿದೆ. ಈ ಕಾರ್ಯಕ್ರಮದ ಪ್ರಾಥಮಿಕ ಸ್ಥಳ ಆರ್‌ಕೆ ಬೀಚ್ ಆಗಿದ್ದು, ಅಲ್ಲಿ ಸರ್ಕಾರವು ಸುಮಾರು 5,00,000 ಜನರಿಗೆ ಯೋಗದಲ್ಲಿ ಭಾಗವಹಿಸಲು ಅವಕಾಶವನ್ನು ಆಯೋಜಿಸಿದೆ.

ಬಂದರು ನಗರಿ ವಿಶಾಖಪಟ್ಟಣಂನ ಆರ್‌ಕೆ ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ ಉದ್ದದ ಕಾರಿಡಾರ್‌ನಲ್ಲಿ ನಡೆಯಲಿರುವ ಈ ಬೃಹತ್ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಕಾರಿಡಾರ್‌ನಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಏಕಕಾಲದಲ್ಲಿ ಯೋಗ ಮಾಡಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!